LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿ: ಎರಡು ಪ್ರಕರಣಗಳ ತನಿಖೆಗೆ ನಿವೃತ್ತ ನ್ಯಾಯಾಧೀಶರ ನೇಮಕ


ಬಳ್ಳಾರಿ,ಜೂ.18: ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಕಾನೂನು ಬಾಹಿರವಾಗಿ ನಡೆದ ಎರಡು ಪ್ರಕರಣಗಳ ಕುರಿತು ತನಿಖೆಗೆ ಬೆಳಗಾವಿ ಜಿಲ್ಲಾ ಸತ್ರ ನ್ಯಾಯಾಲಯದ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಡಿ.ಎಸ್.ಶಿಂಧೆ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಿ ಆದೇಶ ಜಾರಿಗೊಳಿಸಲಾಗಿದೆ ಎಂದು ವಿವಿಯ ಕುಲಪತಿ ಪ್ರೊ.ಎಂ.ಮುನಿರಾಜು ಅವರು ತಿಳಿಸಿದ್ದಾರೆ.
ವಿವಿಯ ಪರೀಕ್ಷಾ ವಿಭಾಗದಲ್ಲಿ ಜರುಗಿದ ಕಾನೂನುಬಾಹಿರ ಘಟಿಕೋತ್ಸವ ಪ್ರಮಾಣ ಪತ್ರ ವಿತರಣೆ ಪ್ರಕರಣ ಮತ್ತು ವಿವಿಯ ಇತಿಹಾಸ, ಪುರಾತತ್ವ ಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕ ಡಾ.ಅನಂತ್ ಎಲ್ ಝಂಡೇಕರ್ ಇವರು ವಿಶ್ವವಿದ್ಯಾಲಯದಲ್ಲಿನ ಸಹ ಪ್ರಾಧ್ಯಾಪಕ ಹುದ್ದೆಯ ನೇಮಕಾತಿ ಮತ್ತು ಪ್ರಭಾರ ಕುಲಪತಿಗಳಾಗಿ ಸೇವೆ ಸಲ್ಲಿಸಿದ ಅವಧಿಯಲ್ಲಿನ ಕೆಲ ಕಾನೂನುಬಾಹಿರ ಆದೇಶಗಳ ಕುರಿತಂತೆ ಕುಲಾಧಿಪತಿಗಳ ಕಚೇರಿಯಲ್ಲಿ ದಾಖಲಾದ ಸಾರ್ವಜನಿಕ ಹಿತಾಸಕ್ತಿ ದೂರಿನ ಪ್ರಕರಣಗಳ ಕುರಿತಂತೆ ಇತ್ತೀಚೆಗೆ ಜರುಗಿದ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ವಿಷಯ ಮಂಡಿಸಲಾಗಿದ್ದು, ಸಭೆಯು ವಿಸ್ತೃತವಾಗಿ ಚರ್ಚಿಸಿ ಈ ಪ್ರಕರಣಗಳ ಕುರಿತಂತೆ ಓರ್ವ ನಿವೃತ್ತ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಲು ತೀರ್ಮಾನಿಸಲಾಗಿದೆ.
ಹಾಗಾಗಿ ಎರಡೂ ಪ್ರಕರಣಗಳ ಕುರಿತು ತನಿಖೆಗೆ ಬೆಳಗಾವಿ ಜಿಲ್ಲಾ ಸತ್ರ ನ್ಯಾಯಾಲಯದ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಡಿ.ಎಸ್.ಶಿಂಧೆ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಿ ಆದೇಶ ಜಾರಿಗೊಳಿಸಲಾಗಿದ್ದು, ಇವರು ಪ್ರಕರಣ ಕುರಿತು 45 ದಿನಗಳ ಒಳಗಾಗಿ ತನಿಖೆ ಕೈಗೊಂಡು ವಿಶ್ವವಿದ್ಯಾಲಯಕ್ಕೆ ವರದಿ ಸಲ್ಲಿಸಲು ಸೂಚಿಸಲಾಗಿದೆ.
ತನಿಖಾ ವರದಿಗಳು ವಿಶ್ವವಿದ್ಯಾಲಯಕ್ಕೆ ಸಲ್ಲಿಕೆಯಾದ ನಂತರ ತಪ್ಪಿತಸ್ಥರ ವಿರುದ್ಧ ಮುಂದಿನ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ವಿಶ್ವವಿದ್ಯಾಲಯದ ಕುಲಪತಿಯವರು ಹಾಗೂ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.different

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್