LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ‌ ಕೊಕ್‌? ಬೇರೆಯವರಿಗಾಗಿ ತಲಾಶ್‌!

ಬೆಂಗಳೂರು, ಜೂನ್ 27: ಬಾಕಿ ಇರುವ ಆರೇಳು ರಾಜ್ಯ ಘಟಕಗಳ ಜೊತೆಯಲ್ಲೇ ಕರ್ನಾಟಕ ಬಿಜೆಪಿ  ಅಧ್ಯಕ್ಷರ ಹೆಸರನ್ನು ಹೈಕಮಾಂಡ್ ಘೋಷಣೆ ಮಾಡುವುದು ಖಚಿತವಾಗಿದೆ. ಯಾವಾಗ ಮತ್ತು ಯಾರು ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲವಾದರೂ ಜುಲೈ ಎರಡನೇ ವಾರದೊಳಗೆ ಈ ಪ್ರಕ್ರಿಯೆ ಮುಗಿಯುವುದು ನಿಚ್ಚಳವಾಗಿದೆ. ಈ ಮಧ್ಯೆ ರಾಜ್ಯಾಧ್ಯಕ್ಷ ಸ್ಥಾನದ ಕುರಿತಾಗಿ ಕಳೆದ ಆರು ತಿಂಗಳಿನಿಂದ ಕೆಲವು ಗಂಭೀರ ಬೆಳವಣಿಗೆಗಳು ನಡೆದಿರುವ ಬಗ್ಗೆ ಕುತೂಹಲಕರ ಮಾಹಿತಿಗಳು ಹೊರಬಿದ್ದಿವೆ. ಬಿಜೆಪಿಯಲ್ಲಿ ಆಗಾಗ ಸಕ್ರಿಯವಾಗಿರುವ ತಟಸ್ಥ ಬಣ ಕೇಂದ್ರ ಸಚಿವ ವಿ. ಸೋಮಣ್ಣ ಅವರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೇರಿಸುವ ‌ನಿಟ್ಟಿನಲ್ಲಿ ತೀವ್ರ ಪ್ರಯತ್ನವನ್ನೂ ನಡೆಸಿತ್ತು. ಕೇಂದ್ರ ಸಚಿವ ಸ್ಥಾ‌ನದ ಜೊತೆಗೆ ಅಧ್ಯಕ್ಷ ಸ್ಥಾ‌ನ ಎಂದಾದರೆ ಒಪ್ಪಿಕೊಳ್ಳಬಹುದು ಎಂಬ ಮನಸ್ಥಿತಿಗೂ ಸೋಮಣ್ಣ ತಲುಪಿದ್ದರು. ಆದರೆ, ಅವರಿಗೆ ಕೇಂದ್ರ ಸಚಿವರಾಗಿಯೇ ಒಳ್ಳೆಯ ಕೆಲಸ ಮಾಡುವಂತೆ ಹೈಕಮಾಂಡ್ ಸೂಚಿಸಿದ ಕಾರಣ ಆ ಪ್ರಸ್ತಾಪ ಅಲ್ಲಿಗೆ ಕೊನೆಗೊಂಡಂತಾಗಿದೆ.








Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡ