ನವದೆಹಲಿ, ಮೇ 19: ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಒಪ್ಪಂದವನ್ನು ಮಧ್ಯಸ್ಥಿಕೆ ವಹಿಸುವ ಮತ್ತು ಪರಮಾಣು ಯುದ್ಧವನ್ನು ತಪ್ಪಿಸುವ ಬಗ್ಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಹೇಳಿಕೆಗಳ ನಡುವೆ, ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಇಂದು ವಿದೇಶಾಂಗ ವ್ಯವಹಾರಗಳ ಸ್ಥಾಯಿ ಸಮಿತಿಯ ಸದಸ್ಯರಿಗೆ ಪಾಕಿಸ್ತಾನದಿಂದ ಯಾವುದೇ ಪರಮಾಣು ದಾಳಿಯ ಸೂಚನೆಯಿಲ್ಲ.
ಕದನವಿರಾಮಕ್ಕೆ ಅಮೆರಿಕ ಮಧ್ಯಸ್ಥಿಕೆಯನ್ನೂ ವಹಿಸಿಲ್ಲ ಎಂದು ಹೇಳಿದ್ದಾರೆ.
ಭಾರತ ಮತ್ತು ಪಾಕಿಸ್ತಾನದ ನಡುವೆ ಕದನವಿರಾಮಕ್ಕೆ ನಾನೇ ಮಧ್ಯಸ್ಥಿಕೆ ವಹಿಸಿದ್ದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ್ದರು. ಈ ಮೂಲಕ ಜಾಗತಿಕವಾಗಿ ಮತ್ತೊಮ್ಮೆ ಅಮೆರಿಕದ ಸ್ಥಾನವನ್ನು ಮೇಲ್ದರ್ಜೆಗೇರಿಸಿಕೊಳ್ಳಲು ಪ್ರಯತ್ನಿಸಿದ್ದರು. ಆದರೆ, ಅಮೆರಿಕದ ಹೇಳಿಕೆಯನ್ನು ಭಾರತ ತಳ್ಳಿಹಾಕಿದೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.