Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವಗುರು ಬಸವಣ್ಣ ಸಂದೇಶ ಪ್ರಸ್ತುತ ಅಗತ್ಯವೆನಿಸಿದೆ : ಡಾ.ಪ್ರಭಾಕರ ಕೋರೆ

ಬೆಳಗಾವಿ 06 : ‘ವಿಶ್ವಗುರು ಬಸವಣ್ಣನವರು ಮಾನವೀಯತೆಯನ್ನು ಸಾರಿ ಸಮಾನತೆಯ ಹರಿಕಾರರು. ಅವರ ಸಂದೇಶ ಇಂದಿಗೂ ಲೋಕಮಾನ್ಯವೆನಿಸಿದೆ. ಪ್ರಸ್ತುತ ಯುದ್ಧ ಹಾಗೂ ಜಾತಿಗಳ ಸಂಘರ್ಷದಲ್ಲಿ ಬದುಕುತ್ತಿರುವ ನಮಗೆ ಬಸವಣ್ಣನವರ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅಗತ್ಯವೆನಿಸಿದೆ’ ಎಂದು ಕೆಎಲ್‌ಇ ಕಾರ್ಯಾಧ್ಯಕ್ಷರು ಹಾಗೂ ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟಿçÃಯ ಉಪಾಧ್ಯಕ್ಷರಾದ ಡಾ.ಪ್ರಭಾಕರ ಕೋರೆಯವರು ಹೇಳಿದರು.

ಅವರು ಬೆಳಗಾವಿ ಶಿವಬಸವ ನಗರದ ಲಿಂಗಾಯತ ಭವನದಲ್ಲಿ ಬಸವ ಜಯಂತಿ ನಿಮಿತ್ತ ಆಯೋಜಿಸಿದ್ದ ಬೆಳಗಾವಿ ಅಖಿಲ ಭಾರತ ವೀರಶೈವ ಅಂಗಾಯತ ಮಹಾಸಭೆ ಜಿಲ್ಲಾ ಘಟಕ, ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತಿ ಉತ್ಸವ ಕೇಂದ್ರ ಸಮಿತಿ ಹಾಗೂ ವಿವಿಧ ಲಿಂಗಾಯತ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ಬೈಕ್ ರ‍್ಯಾಲಿಗೆ ರವಿವಾರ ೦೫-೦೫-೨೦೨೪ ರಂದು ಸಾಯಂಕಾಲ ಚಾಲನೆ ನೀಡಿ ಮಾತನಾಡಿದರು.

‘ಇಂದು ನಾವೆಲ್ಲ ಒಳಪಂಗಡಗಳನ್ನು ಮಾಡಿಕೊಂಡು ಹೋರಾಡುತ್ತಿದ್ದೇವೆ ಅದನ್ನು ಬದಿಗೆ ಇಟ್ಟು ಸಾಂಘಿಕವಾಗಿ ಸಮಾಜವನ್ನು ಕಟ್ಟಬೇಕಾಗಿದೆ. ಅಣ್ಣನವರು ಹನ್ನೆರಡನೆಯ ಶತಮಾನದಲ್ಲಿಯೇ ಸಮಾಜದ ಪ್ರಗತಿಗಾಗಿ ಹೋರಾಡಿದರು. ಎಂಟುನೂರು ವರ್ಷಗಳಾದರೂ ಅವರ ವಿಚಾರಗಳು ಲೋಕ ಪೂಜ್ಯವೆನಿಸಿವೆಕೊಂಡಿವೆ. ಇಂದು ದೇಶ ವಿದೇಶದಲ್ಲಿ ಬಸವಣ್ಣನವರ ವಚನಗಳು ಕುರಿತು ಅಧ್ಯಯನಗಳು ನಡೆಯುತ್ತಿವೆ. ಅವರು ಕನ್ನಡ ನಾಡಿನಲ್ಲಿ ಅವತರಿಸಿರುವುದು ನಮ್ಮ ಸೌಭಾಗ್ಯ ನಾಡಿನುದ್ದಗಲಕ್ಕೂ ನಮ್ಮ ಯುವಜನರು ಅವರ ಸಂದೇಶಗಳನ್ನು ಅರಿಯುವಂತಾಗಬೇಕು. ಬಸವ ಜಯಂತಿಯನ್ನು ಅರ್ಥಪೂರ್ಣಗೊಳಿಸಬೇಕು. ಈ ನಿಮಿತ್ತ ಆಯೋಜಿಸಿರುವ ಬೈಕ್ ರ‍್ಯಾಲಿ ಬಸವ ಜಾಗೃತಿಯನ್ನುಂಟುಮಾಡಲೆAದು’ ಡಾ.ಕೋರೆಯವರು ಹಾರೈಸಿದರು.

ಸಾನ್ನಿಧ್ಯ ವಹಿಸಿದ್ದ ಕಾರಂಜಿಮಠದ ಪರಮಪೂಜ್ಯ ಶ್ರೀ ಗುರುಸಿದ್ಧ ಮಹಾಸ್ವಾಮೀಜಿಯವರು ಆಶೀರ್ವಚನ ನೀಡುತ್ತ, ‘ಬಸವಣ್ಣನವರ ಮಾನವೀಯತೆ ವಿಚಾರಗಳನ್ನು ಅಳವಡಿಸಿಕೊಳ್ಳುವ ಕೆಲಸ ಮೊದಲು ನಡೆಯಬೇಕಾಗಿದೆ. ನೈತಿಕ ಬದುಕು ನಮ್ಮದಾದರೆ ಸಮಾಜ ಸುಧಾರಣೆ ಸಾಧ್ಯ. ನಡೆನುಡಿ ಒಂದಾಗಿ ಜೀವನವನ್ನು ರೂಪಿಸಿಕೊಳ್ಳುವ ಮಹತ್ತರ ಕಾರ್ಯ ಎಲ್ಲರಿಂದ ನಡೆಯಬೇಕಾಗಿದೆ’ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ, ಹಿರಿಯ ನ್ಯಾಯವಾದಿ ಎಂ.ಬಿ.ಜೀರಲಿ, ಡಾ.ಎಚ್.ಬಿ.ರಾಜಶೇಖರ, ಸಾಯಿ ಹಾಸ್ಪಿಟಲ್ ಡಾ.ಎಸ್.ಎಮ್.ದೊಡ್ಡಮನಿ, ಉದ್ದಿಮೆ ರಾಜು ಹತ್ತರಕಿ, ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತಿ ಉತ್ಸವ ಕೇಂದ್ರ ಸಮಿತಿ ಅಧ್ಯಕ್ಷ  ಗುರುದೇವ ನಿಂ. ಪಾಟೀಲ. ಉಪಾಧ್ಯಕ್ಷರಾದ ಸುಜೀತ ಮುಳಗುಂದ,  ಪ್ರಸಾದ ಹಿರೇಮಠ, ರಾಜು ಟೋಪಣ್ಣನವರ, ಬಾಲಚಂದ್ರ ಬಾಗಿ, ವೀಣಾ ನಾಗಮೋತಿ, ರಕ್ಷಾ ದೇಗಿನಾಳ, ವೀರೇಶ ಅಪ್ಪಯ್ಯನವರಮಠ ಮೊದಲಾದವರು ಉಪಸ್ಥಿತರಿದ್ದರು.

ನೂರಾರು ಸಂಖ್ಯೆಯಲ್ಲಿ ಭಕ್ತರು ಬಸವಣ್ಣನವರ ಪ್ರತಿಮೆ ಹಾಗೂ ಬಾವುಟವನ್ನು ಹಿಡಿದುಕೊಂಡು ಬೈಕ್ ರ‍್ಯಾಲಿಯನ್ನು ಯಶಸ್ಸುಗೊಳಿಸಿದರು. ರ‍್ಯಾಲಿಯು ಲಿಂಗಾಯತ ಭವನ, ಶಿವಬಸವನಗರ ಮಾರ್ಗದಿಂದ ಪ್ರಾರಂಭವಾಗಿ ನಾಗನೂರ ಮಠ, ರಾಮದೇವ ಹೊಟೇಲ್, ಚನ್ನಮ್ಮ ವೃತ್ತ, ಗಣಪತಿ ಗಲ್ಲಿ, ಮಾರುತಿ ಗಲ್ಲಿ, ಬೋಗಾರ್ವೆಸ್, ಚಳಕಚೌಕ, ಕಪಿಲೇಶ್ವರ ಮೇಲ್ಸೇತುವೆ, ಶಿವಾಜಿ ಉದ್ಯಾನ, ಶಹಾಪೂರ ಮೂಲಕ ಬಸವೇಶ್ವರ ಸರ್ಕಲ್ (ಖಾಸಬಾಗ) ನಾಥಪೈ ಸರ್ಕಲ್, ಕೆಎಲ್‌ಇ ಬಿ.ಎಂ.ಕAಕಣವಾಡಿ ಆಯುರ್ವೇದಿಕ ಕಾಲೇಜ ಮಾರ್ಗವಾಗಿ ಬಸವವೃತ್ತ(ಗೋವಾ ವೇಸ್)ವರೆಗೆ ಜರುಗಿತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ