LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bijapur

ಶ್ರೀ ಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವಕರ್ಮ ಜಯಂತಿ ಆಚರಣೆ



ತಾಳಿಕೋಟೆ,  ಪಟ್ಟಣದ ಮಿಣಜಗಿ ಕ್ರಾಸ್‌ನ ಶ್ರೀ ಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಗುರುವಾರರಂದು ವಿಶ್ವಕರ್ಮ ಜಯಂತ್ಯೋತ್ಸವವನ್ನು ಅತ್ಯಂತ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.
        ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಎಸ್. ಎಂ. ಸಜ್ಜನ ಅವರು ಭಾಗವಹಿಸಿ ಮಾತನಾಡಿ, "ವಿಶ್ವಕರ್ಮ ದೇವರು ಹಿಂದೂ ಪುರಾಣಗಳಲ್ಲಿ ದೇವತೆಗಳ ಪ್ರಸಿದ್ಧ ಶಿಲ್ಪಿ ಹಾಗೂ ವಾಸ್ತುಶಿಲ್ಪಿಯಾಗಿದ್ದಾರೆ. ಕಲೆ, ಶಿಲ್ಪಕಲೆ, ಕಟ್ಟಡ ನಿರ್ಮಾಣ ಹಾಗೂ ತಾಂತ್ರಿಕ ಕೌಶಲ್ಯದ ಅಧಿದೇವತೆಯಾಗಿ ಅವರನ್ನು ಪೂಜಿಸಲಾಗುತ್ತದೆ. ದೇವತೆಗಳಿಗಾಗಿ ಅನೇಕ ಅದ್ಭುತ ಅರಮನೆಗಳು, ನಗರಗಳು ಮತ್ತು ಆಯುಧಗಳನ್ನು ಅವರು ನಿರ್ಮಿಸಿದ್ದಾರೆ. ಶ್ರೀಕೃಷ್ಣನ ದ್ವಾರಕಾ ನಗರ, ಚಿನ್ನದ ಲಂಕೆ ಹಾಗೂ ದೇವತೆಗಳ ವಿವಿಧ ನಿರ್ಮಾಣಗಳು ಅವರೊಂದಿಗೆ ಸಂಬಂಧಿಸಿವೆ" ಎಂದು ಸ್ಮರಿಸಿದರಲ್ಲದೇ ವಿಶ್ವಕರ್ಮ ಅವರ ಆದರ್ಶಗಳು ಮತ್ತು ಮೌಲ್ಯಗಳು ಇಂದಿನ ವಿದ್ಯಾರ್ಥಿಗಳಿಗೆ ಹಾಗೂ ಸಮಾಜಕ್ಕೆ ಪ್ರೇರಣೆಯಾಗಿದ್ದು, ಪ್ರತಿಯೊಬ್ಬರೂ ಅದನ್ನು ಮೈಗೂಡಿಸಿಕೊಂಡು ಸಾಗಬೇಕೆಂದು ಕರೆ ನೀಡಿದರು.
      ಈ ಸಮಯದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ವಿವೇಕಾನಂದ ಸಜ್ಜನ, ಮುಖ್ಯಗುರುಗಳಾದ ಬಸವರಾಜ, ಶ್ರೀಮತಿ ಆರ್. ಎಸ್. ದೇಸಾಯಿ, ದೈಹಿಕ ಶಿಕ್ಷಕ ಶಿವಾನಂದ ಸುಣಧೋಳಿ, ಸಿಬಿಎಸ್‌ಇ ಪ್ರಾಚಾರ್ಯ ಜಯಚಂದ್ರ, ಬೆಸ್ಟ್ ಪಿಯು ಕಾಲೇಜಿನ ಪ್ರಾಚಾರ್ಯ ಎಮ್. ಮಾರೇಣ್ಣಾ, ಬಿ.ಎಡ್. ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಜಿ. ಎನ್. ಪಾಟೀಲ, ಐ.ಟಿ.ಐ. ಕಾಲೇಜಿನ ರಾಜು ಹಜೇರಿ ಸೇರಿದಂತೆ ಸರ್ವ ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ