Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವಕರ್ಮ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ವಿಶ್ವಕರ್ಮ ನೌಕರಶ್ರೀ, ಸಾಧಕಶ್ರೀ ಪ್ರಶಸ್ತಿ ಪ್ರದಾನ ಮತ್ತು ನಿವೃತ್ತ ನೌಕರ ದಂಪತಿಗಳಿಗೆ ಸನ್ಮಾನ

ಗದಗ, ೨೦ : ಗದಗ ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಅಂಗ ಸಂಸ್ಥೆಗಳ ಸಹಯೋಗದಲ್ಲಿ ೮ ನೇ ವರ್ಷದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಕಲಿಕಾ ಸಾಮಗ್ರಿಗಳ ವಿತರಣೆ, ವಿಶ್ವಕರ್ಮ ನೌಕರಶ್ರೀ, ವಿಶ್ವಕರ್ಮ ಸಾಧಕಶ್ರೀ ಪ್ರಶಸ್ತಿ ಪ್ರದಾನ ಮತ್ತು ಸಂಘದ ಸದಸ್ಯ ನಿವೃತ್ತ ನೌಕರ ದಂಪತಿಗಳಿಗೆ ಸನ್ಮಾನ ಸಮಾರಂಭವನ್ನು ದಿನಾಂಕ ೨೪ ರ ರವಿವಾರ ಬೆಳೆಗ್ಗೆ ೯-೩೦ ಗಂಟೆಗೆ ನಗರದ ಗಂಗಿಮಡಿ ಕ್ರಾಸ್, ವಿಜಯನಗರ ಬಡಾವಣೆಯಲ್ಲಿರುವ ಶ್ರೀವಿಶ್ವಕರ್ಮ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಗದಗ ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ರಾಜಗೋಪಾಲ ಡಿ. ಕಡ್ಲಿಕೊಪ್ಪ ಹೇಳಿದರು.
ಅವರು ಬುಧವಾರ ನಗರದ ವಿಶ್ವಕರ್ಮ ಭವನದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ ಸಮಾರಂಭದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಶಿರೋಳ ಯಚ್ಚರಸ್ವಾಮಿಗಳ ಸಂಸ್ಥಾನ ಗವಿಮಠದ ಶ್ರೀ ಅಭಿನವ ಯಚ್ಚರಮಹಾಸ್ವಾಮೀಜಿ ಸಾನಿಧ್ಯವಹಿಸುವರು. ವಿಧಾನ ಪರಿಷತ್ ಸದಸ್ಯರಾದ ಎಸ್. ವ್ವಿ. ಸಂಕನೂರ ಉದ್ಘಾಟಿಸುವರು. ಗದಗ ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ರಾಜಗೋಪಾಲ ಡಿ. ಕಡ್ಲಿಕೊಪ್ಪ ಅಧ್ಯಕ್ಷತೆವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕರಾದ ಕೆ. ಡಿ. ಬಡಿಗೇರ, ಧಾರವಾಡ ಜಿಲ್ಲಾ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಕಾಳಪ್ಪ ವ್ಹಿ. ಬಡಿಗೇರ, ರಾಯಚೂರ ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಡಾ. ಮೋಹನ ವಾಯ್. ಪತ್ತಾರ, ಧಾರವಾಡ ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ವಿಠ್ಠಲ ಜಿ. ಕಮ್ಮಾರ, ಹಾವೇರಿ ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಈರಪ್ಪ ಶ. ಪಂಚಾನನ, ಬಾಗಲಕೋಟ ತಾಲೂಕಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ದೇವೇಂದ್ರಪ್ಪ ಮ. ಅಗಲತಕಟ್ಟಿ, ರಾಯಚೂರ ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಕೆ. ರಾಮು ಗಾಣದಾಳ, ಕೊಪ್ಪಳ ತಾಲೂಕಾ ವಿಶ್ವಕರ್ಮ ಸಮಾಜ ಅಧ್ಯಕ್ಷರಾದ ದೇವೇಂದ್ರಪ್ಪ ಎಚ್. ಬಡಿಗೇರ, ಕೊಪ್ಪಳ ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ನಿರ್ದೇಶಕರು ಹಾಗೂ ವಿಶ್ವಕರ್ಮ ಸಮಾಜದ ಕಾಯಾಧ್ಯಕ್ಷರಾದ ರುದ್ರಪ್ಪ ಕೆ. ಬಡಿಗೇರ, ಶಹಪೂರ ತಾಲೂಕಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಮೌನೇಶ ಕೆಂಭಾವಿ ಆಗಮಿಸುವರು ಎಂದು ತಿಳಿಸಿದರು. 
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಕಲಿಕಾ ಸಾಮಗ್ರಿಗಳ ವಿತರಣೆ, ವಿಶ್ವಕರ್ಮ ನೌಕರಶ್ರೀ, ವಿಶ್ವಕರ್ಮ ಸಾಧಕಶ್ರೀ ಪ್ರಶಸ್ತಿ ಪ್ರದಾನ ಮತ್ತು ಸಂಘದ ಸದಸ್ಯ ದಂಪತಿಗಳಿಗೆ ಸನ್ಮಾನ ಸಮಾರಂಭದಲ್ಲಿ ಜಿಲ್ಲೆಯ ಸಮಸ್ತ ವಿಶ್ವಕರ್ಮ ಬಂಧುಗಳು ಪಾಲ್ಗೊಂಡು ಸಭೆಯನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಡಾ. ಸಿ. ವಿ. ಬಡಿಗೇರ, ವಿಶ್ವನಾಥ ಯ. ಕಮ್ಮಾರ, ಶ್ರೀಧರ ಕೊಣ್ಣೂರ, ಮೌನೇಶ ಸಿ. ಬಡಿಗೇರ(ನರೇಗಲ್ಲ), ಮಹೇಶ ಕಮ್ಮಾರ, ವಿಶ್ವನಾಥ ರಾಜನಾಳ, ಶ್ರೀಮತಿ ಸುಮಂಗಲಾ ಪತ್ತಾರ, ಶಂಕರ ಪತ್ತಾರ, ಆನಂದ ಕಮ್ಮಾರ, ನಾಗರಾಜ ಕಮ್ಮಾರ, ಶಂಕರ ಕಂಚಗಾರ, ಗೋಪಾಲ ಬಡಿಗೇರ, ಕುಮಾರ ಬಡಿಗೇರ, ಪ್ರಕಾಶ ಬಡಿಗೇರ, ಈರಣ್ಣ ಬಡಿಗೇರ, ವಿಶ್ವನಾಥ ಪತ್ತಾರ, ಮಧುಸೂದನ ವಿಶ್ವಕರ್ಮ ಸೇರದಂತೆ ಸಮಾಜ ಬಾಂಧವರು ಪಾಲ್ಗೊಂಡಿದ್ದರು. 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ