ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿರುವ 'ಅರಿವು ಕೇಂದ್ರ' ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಕ್ಕೆ ಗದಗ ಜಿಲ್ಲಾ ಉಸ್ತುವಾರಿ ಕಾಾರ್ಯದರ್ಶಿ ಡಾ. ಎಂ.ವಿ. ವೆಂಕಟೇಶ ಭೇಟಿ ನೀಡಿ ಗ್ರಂಥಾಲಯವನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್. ಉಪವಿಭಾಗಧಿಕಾರಿ ಗಂಗಪ್ಪ ಎಂ,, ವಿವಿಧ ಇಲಾಖೆಯ ಅಧಿಕಾರಿಗಳು, ಊರಿನ ಹಿರಿಯರು ಉಪಸ್ಥಿತರಿದ್ದರು.
