LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

'ವೃಕ್ಷಮಾತೆ' ತಿಮ್ಮಕ್ಕ ಇನ್ನಿಲ್ಲ




ಬೆಂಗಳೂರು (ನ.14): ಕರ್ನಾಟಕದಲ್ಲಿ ಮರ-ಗಿಡ, ಪರಿಸರ ರಕ್ಷಣೆ ಎಂದ್ರೆ ಥಟ್​​ ಅಂತ ನೆನಪಾಗುವ ಹೆಸರೇ ಸಾಲು ಮರದ ತಿಮ್ಮಕ್ಕ. ಸಾವಿರಾರು ಗಿಟ್ಟಗಳನ್ನ ನೆಟ್ಟು ಅವುಗಳನ್ನ ಮಕ್ಕಳಂತೆ ಸಾಕಿದ ಸಾಲು ಮರದ ತಿಮ್ಮಕ್ಕ  ಇಂದು ಇಹಲೋಕ ತ್ಯಜಿಸಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಾಲು ಮರದ ತಿಮ್ಮಕ್ಕ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಉಸಿರೆಳೆದಿದ್ದಾರೆ. ಸಾಲುಮರದ ತಿಮ್ಮಕ್ಕ ಅವರಿಗೆ 114 ವರ್ಷ ವಯಸ್ಸಾಗಿತ್ತು. ವೃಕ್ಷಮಾತೆ ಎಂದು ಕರೆಸಿಕೊಳ್ಳುತ್ತಿದ್ದ ಸಾಲು ಮರದ ತಿಮ್ಮಕ್ಕ ನೆಟ್ಟ ಗಿಡಗಳೆಷ್ಟು ಗೊತ್ತಾ? ಅವುಗಳ ಮೌಲ್ಯವೇನು?







ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಚಿಕ್ಕರಂಗಯ್ಯ ಹಾಗೂ ವಿಜಯಮ್ಮ ದಂಪತಿಯ ಪುತ್ರಿಯಾಗಿ ತಿಮ್ಮಕ್ಕ ಜನಿಸಿದರು. ಪೋಷಕರು ಶಾಲೆ ಕಳುಹಿಸದ ಹಿನ್ನೆಲೆ ತಿಮ್ಮಕ್ಕ ಮೊದಲು ದನಕರುಗಳನ್ನು ಮೇಯಿಸುತ್ತಿದ್ದರು.  ದಿನಗೂಲಿ ನೌಕರರಾಗಿ ಕೆಲಸ ಮಾಡಿದ್ರು. ತಿಮ್ಮಕ್ಕ ಅವ್ರಿಗೆ 12ನೇ ವಯಸ್ಸಿನಲ್ಲೇ ಚಿಕ್ಕಯ್ಯ ಎನ್ನುವವರ ಜೊತೆ ಮದುವೆಯಾಯ್ತು.



ಚಿಕ್ಕಯ್ಯ ಅವರು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದವರಾಗಿದ್ರು. ಮದುವೆಯಾಗಿ ಹಲವು ವರ್ಷಗಳಾದ್ರೂ ತಿಮ್ಮಕ್ಕ ಅವರಿಗೆ ಮಕ್ಕಳಾಗಿರಲ್ಲಿಲ್ಲ. ಹೀಗಾಗಿ ತಿಮ್ಮಕ್ಕ ಮಕ್ಕಳಿಲ್ಲದ ದುಃಖವನ್ನು ಮರೆಯೋಕೆ ಅಂತ ರಸ್ತೆಯ ಬದಿಗಳಲ್ಲಿ ಸಸಿಗಳನ್ನು ನೆಡಲು ಆರಂಭಿಸಿದ್ದರಂತೆ.





Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್