ಲೋಕಸಭೆಯಲ್ಲಿ ಸುಮಾರು 12 ಗಂಟೆಗಳ ಕಾಲ ನಡೆದ ಚರ್ಚೆಯ ನಂತರ, ವಕ್ಫ್ (ತಿದ್ದುಪಡಿ) ಮಸೂದೆಯನ್ನು ಇಂದು ರಾಜ್ಯಸಭೆಯಲ್ಲಿ ಕೈಗೆತ್ತಿಕೊಳ್ಳಲಾಯಿತು. ಮಸೂದೆಯ ಪರವಾಗಿ 288 ಮತಗಳು ಮತ್ತು ಮಸೂದೆಯ ವಿರುದ್ಧ 232 ಮತಗಳು ಚಲಾವಣೆಯಾಗಿ, ಲೋಕಸಭೆಯು ವಕ್ಫ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿದೆ.
ರಾಜ್ಯಸಭೆಯಲ್ಲಿ ನಡೆದ ಚರ್ಚೆಗಳೇನು? 8.72 ಲಕ್ಷ ವಕ್ಫ್ ಆಸ್ತಿಗಳಿವೆ., 2006 ರಲ್ಲಿ, ಸಾಚಾರ್ ಸಮಿತಿಯು 4.9 ಲಕ್ಷ ವಕ್ಫ್ ಆಸ್ತಿಗಳಿಂದ 12,000 ಕೋಟಿ ರೂ.ಗಳ ಆದಾಯವನ್ನು ಅಂದಾಜಿಸಿದ್ದರೆ, ಈ ಆಸ್ತಿಗಳು ಈಗ ಎಷ್ಟು ಆದಾಯವನ್ನು ಗಳಿಸುತ್ತಿವೆ ಎಂದು ನೀವು ಊಹಿಸಬಹುದು ಎಂದು ರಾಜ್ಯಸಭೆಯಲ್ಲಿ ಕಿರಣ್ ರಿಜಿಜು ಹೇಳಿದರು. ಮಸೂದೆಯು ಜನರ ಧಾರ್ಮಿಕ ಸ್ವಾತಂತ್ರ್ಯಕ್ಕೆ ಅಡ್ಡಿಯಾಗುವುದಿಲ್ಲ ಎಂದು ಅವರು ಪುನರುಚ್ಚರಿಸಿದರು ಮತ್ತು ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳು ಮಸೂದೆಯನ್ನು ಬೆಂಬಲಿಸುವಂತೆ ಒತ್ತಾಯಿಸಿದರು.