Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

'ಅವರಪ್ಪನಿಗೆ ಹುಟ್ಟಿರುವವರು ಸಿಡಿ ಬಿಡುಗಡೆ ಮಾಡಲಿ': ಮುಸ್ಲಿಂ ಮುಖಂಡ ಮತ್ತು ಯತ್ನಾಳ್ ನಡುವೆ ಮಾತಿನ ಸಮರ; ಶಾಸಕ ಸವಾಲ್

ವಿಜಯಪುರ, ಅಕ್ಟೋಬರ್​ 15: ಸುಮ್ಮನೆ ರಾಜಕಾರಣ ಮಾಡಿಕೊಂಡು ಇರಬೇಕು, ಇಲ್ಲದೇ ಹೋದರೆ ನಿಮ್ಮ ಸಿಡಿ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದ ಹೆಚ್ಚುವರಿ ಜಿಲ್ಲಾ ಸರ್ಕಾರಿ ಅಭಿಯೋಜನಕ ಎಸ್ ಎಸ್ ಖಾದ್ರಿ  ಮತ್ತು ಮುಸ್ಲಿಂ ಮುಖಂಡರ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ತಿರುಗೇಟು ನೀಡಿದ್ದಾರೆ.

“ಖಾದ್ರಿ ಎಂಬ ಒಬ್ಬ ವಕ್ಫ್ ಆಸ್ತಿ ಲೂಟಿಕೋರ, ಹಿಂದೆ ಜಿಲ್ಲೆಯಿಂದ ಗಡೀಪಾರಾಗಿದ್ದವನು, ನಾವು ವಕ್ಫ್ ಆಸ್ತಿಯ ಲೂಟಿಯ ಬಗ್ಗೆ ಪ್ರತಿಭಟನೆಗೆ ಮುಂದಾಗಿರುವಾಗ ನನ್ನ ಸಿ.ಡಿ ಬಿಡುಗಡೆ ಮಾಡುತ್ತೀನಿ ಎಂದು ಹೇಳಿರುವುದನ್ನು ನಾನು ಗಮನಿಸಿದ್ದೇನೆ.

ಹಿಂದೆಯೂ ನಾನು ಹೇಳಿದ್ದೆ ಅವರ ಅಪ್ಪನಿಗೆ ಯಾರಾದರು ಹುಟ್ಟಿರುವವರು ಬಿಡುಗಡೆ ಮಾಡಲಿ ಎಂದು, ಈಗ ಅದನ್ನೇ ಪುನರುಚ್ಚರಿಸುತ್ತಿದ್ದೇನೆ. ಇಂತಹ ಅಯೋಗ್ಯರ ಹೇಳಿಕೆಗಳನ್ನು ಕೆಲ ಮಾಧ್ಯಮಗಳು ವೈಭವೀಕರಿಸುತ್ತಿರುವುದನ್ನೂ ಗಮನಿಸಿದ್ದೇನೆ. ಈಗಾಗಲೇ ಮಾನಹಾನಿ ಪ್ರಕರಣದ ಜೊತೆಗೆ ಕ್ರಿಮಿನಲ್ ಪ್ರಕರಣ ದಾಖಲಿಸಲು ಮುಂದಾಗಿದ್ದೇನೆ” ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಸಾಮಾಜಿಕ ಮಾಧ್ಯಮ ಎಕ್ಸ್​​ ಮುಖಾಂತರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಿ…… ಮುಚ್ಚಿಕೊಂಡು ಬಸನಗೌಡ ಪಾಟೀಲ್​ ಯತ್ನಾಳ ಅವರು ರಾಜಕಾರಣ ಮಾಡಬೇಕು. ಇಲ್ಲದಿದ್ದರೇ ನವೆಂಬರ್​ 6 ರಂದು ಸಿಡಿ ಬಿಡುಗಡೆ ಮಾಡುವುದು ಗ್ಯಾರೆಂಟಿ ಎಂದು ವಿಜಯಪುರ ಎಸ್​ಎಸ್​ ಖಾದ್ರಿ ಮತ್ತು ಮುಸ್ಲಿಂ ಮುಖಂಡರು ಎಚ್ಚರಿಕೆ ನೀಡಿದ್ದರು.

ವಿಜಯಪುರ ಜಿಲ್ಲೆಯ 12000 ಎಕರೆ, ವಿಜಯಪುರ ತಾಲೂಕಿನ 2643 ಎಕರೆ ವಕ್ಫ ಆಸ್ತಿ ಎಂದು ನೋಂದಣಿ ಮಾಡಲು ಸಚಿವ ಜಮೀರ್ ಅಹ್ಮದ್ ಖಾನ್ ಆದೇಶಿಸಿದ್ದಾರೆ. ಸಂಘ-ಸಂಸ್ಥೆಗಳ, ದೇವಸ್ಥಾನಗಳ, ಸರ್ಕಾರಿ ಆಸ್ತಿ ಜಮೀನುಗಳನ್ನು ವಕ್ಪ್ ಆಸ್ತಿ ಎಂದು ಉತಾರೆಯಲ್ಲಿ ನೋಂದಣಿ ಮಾಡುವುದನ್ನು ಕೈಬಿಡುವಂತೆ ಒತ್ತಾಯಿಸಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಪ್ರತಿಭಟನೆಗೆ​ ಕರೆ ಕೊಟ್ಟಿದ್ದಾರೆ.

ಅದರಂತೆ ಇಂದು (ಅ.15) ಸಿದ್ದೇಶ್ವರ ದೇವಸ್ಥಾನದ ಬಳಿ ಪ್ರತಿಭಟನಾ ಸಮಾವೇಶ ನಡೆಯಲಿದ್ದು, ಬಿಜೆಪಿ ನಾಯಕ ಸಿಟಿ ರವಿ, ಚಿಂತಕ ಚಕ್ರವರ್ತಿ ಸೂಲಿಬೆಲೆ ಭಾಗಿಯಾಗಲಿದ್ದಾರೆ. ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಅವರ ನೇತೃತ್ವದ ಪ್ರತಿಭಟನೆಗೆ ಎಸ್​ಎಸ್​ ಖಾದ್ರಿ ಮತ್ತು ಮುಸ್ಲಿಂ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ. ಶಾಸಕ ಬಸನಗೌಡ ಯತ್ನಾಳ್​ ವಿರುದ್ಧ ಸಿಡಿ ಅಸ್ತ್ರ ಪ್ರಯೋಗಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ