Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರೋಗ್ಯಕರ, ಸುಸ್ಥಿರ ಸಮುದಾಯ ನಿರ್ಮಾಣಕ್ಕೆ ತ್ಯಾಜ್ಯ ನಿರ್ವಹಣೆ ಅತ್ಯಗತ್ಯ: ರಮೇಶ್.ಬಿ.ಎನ್

ಬಳ್ಳಾರಿ,ಸೆ.08 ಆರೋಗ್ಯಕರ ಮತ್ತು ಸುಸ್ಥಿರ ಸಮುದಾಯಗಳನ್ನು ನಿರ್ಮಿಸಲು ತ್ಯಾಜ್ಯ ನಿರ್ವಹಣೆಯು ಅತ್ಯಗತ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ನಿವೃತ್ತ ಮುಖ್ಯ ಪರಿಸರ ಅಧಿಕಾರಿ ರಮೇಶ್.ಬಿ.ಎನ್ ಅವರು ಹೇಳಿದರು.

ನಗರಾಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲೆಯ ಎಲ್ಲಾ ನಗರ, ಸ್ಥಳೀಯ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸ್ವಚ್ಛ ಭಾರತ್ ಮಿಷನ್ 2.0 ರ ಸಾಮರ್ಥ್ಯ ಅಭಿವೃದ್ದಿ ಘಟಕದಡಿ ಸಮಗ್ರ ಘನ ತ್ಯಾಜ್ಯ ವಸ್ತು ನಿರ್ವಹಣೆಯ ಕುರಿತು ನಗರದ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಕಸದ ಉತ್ಪಾದನೆಯನ್ನು ಕಡಿಮೆ ಮಾಡಲು, ಮರುಬಳಕೆ ಮತ್ತು ಅದನ್ನು ಗರಿಷ್ಠಗೊಳಿಸಲು ಹಾಗೂ ಪರಿಸರದ ಮೇಲಿನ ತ್ಯಾಜ್ಯದ ಪರಿಣಾಮವನ್ನು ಕಡಿಮೆ ಮಾಡಲು ಸಮಗ್ರ ತ್ಯಾಜ್ಯ ನಿರ್ವಹಣೆಯು ವಿಶಾಲವಾದ ಕಾರ್ಯಚಟುವಟಿಕೆಯಾಗಿದೆ ಎಂದು ತಿಳಿಸಿದರು.

ಸಮುದಾಯಗಳಲ್ಲಿ ಉತ್ಪಾದನೆಯಾಗುವ ಕಸ, ಕಸದ ಸಂಗ್ರಹ, ಸಾಗಣೆ, ವಿಂಗಡಣೆ, ಸಂಸ್ಕರಣೆ ಮತ್ತು ವಿಲೇವಾರಿ ಪ್ರಕ್ರಿಯೆಗಳನ್ನು ಸೂಕ್ತವಾಗಿ ಅರಿತುಕೊಳ್ಳಬೇಕು. ಆರೋಗ್ಯಕರ ಮತ್ತು ಸುಸ್ಥಿರ ಸಮುದಾಯಗಳನ್ನು ನಿರ್ಮಿಸಲು ತ್ಯಾಜ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವುದು ಪ್ರಮುಖ ಗುರಿಯಾಗಿದೆ ಎಂದರು.

ಸ್ವಚ್ಛತಾ ಕಾರ್ಯದ ಬಗೆ ಮನೆ-ಮನೆ ಕಸ ವಿಂಗಡಣೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಈ ಕುರಿತು ಸಾರ್ವಜನಿಕರಿಗೆ ಸೂಚನೆಗಳನ್ನು ನೀಡಲು ಸಿಬ್ಬಂದಿಯವರಿಗೆ ಹ್ಯಾಂಡ್ ಮೈಕ್ ಗಳನ್ನು ವಿತರಿಸಬೇಕು ಎಂದರಲ್ಲದೇ, ಬಳಕೆಯ ಕುರಿತು ಮಾರ್ಗಸೂಚಿ ನೀಡಿದರು.

ಪೌರಕಾರ್ಮಿಕರಿಗೆ ಹಾಗೂ ಸಫಾಯಿ ಕರ್ಮಚಾರಿಗಳಿಗೆ  ಸುರಕ್ಷತಾ ಸಾಧನಗಳ ಬಳಕೆ ಹಾಗೂ ನಿರ್ವಹಣೆಗಳ ಕುರಿತು ಹಾಗೂ ಪ್ರಥಮ ಚಿಕಿತ್ಸೆಯ ಕಿಟ್ ಬಳಕೆಯ ಕುರಿತು ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಅಬ್ದುಲ್ ರೆಹಮಾನ್ ಮಾತನಾಡಿ, ತರಬೇತಿ ಕಾರ್ಯಾಗಾರದ ಸದುಪಯೋಗ ಪಡೆದುಕೊಂಡು ಕಮ್ಯುನಿಟಿ ಮೊಬೆಲೈಜರ್ ಗಳು ಸೂಕ್ತ ಸಲಹೆ-ಸೂಚನೆಗಳನ್ನು ಅಳವಡಿಸಿಕೊಳ್ಳುವ ಮೂಲಕ ನಗರ, ಪಟ್ಟಣ, ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತೆ ಅಭಿವೃದ್ದಿಗೆ ಆದ್ಯತೆ ನೀಡಲು ಮುಂದಾಗಬೇಕು ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ಪ್ರಕೃತಿ ಫೌಂಡೇಷನ್, ಬೆಂಗಳೂರು ಮತ್ತು ಲೆಟ್ ಬಿ ದ ಚೇಂಜ್ ಸಂಸ್ಥೆಯ ಪದಾಧಿಕಾರಿಗಳು, ಮೂಲ ಘನ ತ್ಯಾಜ್ಯ ನಿರ್ವಹಣೆ ಹಾಗೂ ಮೂಲ ವಿಂಗಡಣೆ ಮತ್ತು ಮನೆಯಲ್ಲಿಯೇ ಗೊಬ್ಬರ ತಯಾರಿಕೆಯ ಕುರಿತು ನೇರ ಸಂದರ್ಶನದ ಮೂಲಕ ತರಬೇತಿ ನೀಡಲಾಯಿತು.

ಸ್ವಚ್ಛ ಸರ್ವೇಕ್ಷಣೆ -2025 ರನ್ವಯ ಜಿಲ್ಲೆಯ ಫಲಿತಾಂಶ ಹಾಗೂ ಶ್ರೇಣಿಯ ಕುರಿತು ಪರಿಶೀಲನೆ ಮಾಡಿ, ಆಯಾ ಹಂತ, ಘಟಕದಲ್ಲಿ ಕಂಡುಬಂದ ಲೋಪ-ದೋಷಗಳ ನ್ಯೂನ್ಯತೆಗಳನ್ನು ಸರಿಪಡಿಸಿಕೊಳ್ಳುವ ಕುರಿತು ವಿಶ್ಲೇಷಿಸಲಾಯಿತು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆಯುಕ್ತ ಪಿ.ಎಸ್.ಮಂಜುನಾಥ್, ಉಪಆಯುಕ್ತ ಅಬ್ದುಲ್ ರೆಹಮಾನ್, ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು, ಪರಿಸರ ಅಭಿಯಂತರರು, ಆರೋಗ್ಯ ನಿರೀಕ್ಷಕರು ಮತ್ತು ಕಮ್ಯುನಿಟಿ ಮೊಬೆಲೈಜರ್ ಗಳು ಹಾಗೂ ಇತರೆ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ