ನಕಲಿ ವಾಟರ್ ಬಾಟಲ್ ಮಾರಾಟ ಮಾಡುವ ಕಂಪನಿಗಳ ವಿರುದ್ಧ ಆಹಾರ ಇಲಾಖೆ ಸಮರ ಮುಂದುವರಿಸಿದೆ. ವಿವಿಧೆಡೆ ದಾಳಿ ನಡೆಸಿ ವಾಟರ್ ಬಾಟಲ್ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಕೋವಾದಲ್ಲೂ ಕಲಬೆರಕೆ ಪತ್ತೆ: ಸಿಹಿ ತಿಂಡಿಗಳಿಗೆ ಬಳಸುವ ಕೋವಾದಲ್ಲಿ ಕೂಡ ಕಲಬೆರಕೆ ಪತ್ತೆಯಾಗಿರುವುದಾಗಿ ಆಹಾರ ಇಲಾಖೆಯ ಪರೀಕ್ಷೆಯ ವರದಿ ತಿಳಿಸಿದೆ. ಇದರೊಂದಿಗೆ ಪನೀರ್ ನಂತರ ಇದೀಗ ಕೋವಾ ಕೂಡ ಆರೋಗ್ಯಕ್ಕೆ ಮಾರಕ ಎಂಬುದು ಬೆಳಕಿಗೆ ಬಂದಂತಾಗಿದೆ.
ಮತ್ತೊಂದೆಡೆ, ಈಗಾಗಲೇ ಪನೀರ್ ಮತ್ತು ಐಸ್ ಕ್ರೀಮ್ ಮಾದರಿಗಳನ್ನು ಪ್ರಯೋಗಾಲಯ ಪರೀಕ್ಷೆಗೆ ಒಳಪಡಿಸಿರುವ ಆಹಾರ ಇಲಾಖೆ ಇದೀಗ ಮತ್ತೊಂದು ಸುತ್ತಿನ ಕಾರ್ಯಾಚರಣೆ ಮುಂದುವರಿಸಿದೆ. ಬೆಂಗಳೂರಿನ ವಿವಿಧ ಕಡೆಗಳಿಂದ ಮಾದರಿಗಳನ್ನು ಸಂಗ್ರಹಿಸಲಾಗಿದ್ದು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಪನೀರ್ ಹಾಗೂ ಐಸ್ ಕ್ರೀಮ್ ಗಳಲ್ಲಿ ರಾಸಾಯನಿಕ ಬಳಕೆ ಆರೋಪದ ಹಿನ್ನೆಲೆಯಲ್ಲಿ ಇಲಾಖೆ ಈ ಕ್ರಮ ಕೈಗೊಂಡಿದೆ.
