Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಡಕೊಳ ಪುನರ್ವಸತಿ ಕೇಂದ್ರದ ನಿವಾಸಿಗಳಿಗೆ ತಪ್ಪದ ನೀರಿನ ತೊಂದರೆ



ಹಸಿರು ಕ್ರಾಂತಿ ವರದಿ,ಜಮಖಂಡಿ :‌ ನಗರದ ಸಮೀಪವಿರುವ ಕಡಕೊಳ ಪುನರ್ವಸತಿ ಕೇಂದ್ರದಲ್ಲಿ ನೀರಿನ ಸಮಸ್ಯೆ ಉಂಟಾಗಿದೆ. ನೀರಿನ ಸಮಸ್ಯೆಯ ಪರಿಹಾರಕ್ಕೆ ಅನೇಕಬಾರಿಗೆ ಸಲ್ಲಿಸಿದ ಮನವಿಗಳು ಪ್ರಕಟಿಸಿದ ಸುದ್ದಿಗಳು ಪ್ರಯೋಜನವಾಗಿಲ್ಲ. ಪತ್ರಕೆಯಲ್ಲಿ ಸುದ್ದಿ ಪ್ರಕಟವಾದಾಗ ನೀರಿನ ಸಮಸ್ಯೆ ಬಗೆಹರಿಸುತ್ತೇವೆ ಎಂದು ಸಬೂಬು ಹೇಳಿರುವ ಅಧಿಕಾರಿಗಳು ಈ ವರೆಗೂ ಕ್ರಮ ಜರುಗಿಸಿಲ್ಲ. ನಗರಸಭೆಯವರಿಗೆ ಹೇಳಿ

ಪ್ಲಾಟ್‌ನಲ್ಲಿರುವ ತೆರೆದ ಬಾವಿಯೊಂದನ್ನು ಸ್ವಚ್ಛಗೊಳಿಸಿ ಅದರಲ್ಲಿಯ ನೀರನ್ನು ಬಳಕೆಗೆ ಅನುಕೂಲ ಮಾಡಿಸಿಕೊಡಲಾಗುವದೆಂದು ಅಧಿಕಾರಿಗಳು ಹೇಳಿಕೆ ನೀಡಿದ್ದರು ಆದರೆ ಈ ವರೆಗೂ ಬಾವಿಯ ಸ್ವಚ್ಛತೆಯಾಗಿಲ್ಲ. ಬಾವಿಯಲ್ಲಿನತ್ಯಾಜ್ಯವನ್ನು ತೆಗೆಯಲಾಗಿದೆ, ಹಳೆಯ ಕೊಳೆತ ನೀರನ್ನು ಎತ್ತಿ ಸ್ವಚ್ಛಗೊಳಿಸುವ ಕೆಲಸವಾಗಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ನಿವಾಸಿಗಳಿಗೆ ನೀರಿನ ತೊಂದರೆ ತಪ್ಪಿಲ್ಲ. ಪ್ರತಿನಿತ್ಯ ನೀರಿಗಾಗಿ 3 ಕಿ.ಮಿ ದೂರ ಸಂಚರಿಸಿ ನೀರು ತಂದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಪುನರ್ವಸತಿ ಕೇಂದ್ರದ ನಿವಾಸಿಗಳು ಮಾಹಿತಿ ನೀಡಿದ್ದಾರೆ.



ಕಡು ಬೇಸಿಗೆ ಇರುವದರಿಂದ ಅಂತರಜಲಮಟ್ಟ ಕುಸಿದು ಹೋಗಿದ್ದು ಕೊಳವೆಬಾವಿಗಳು ಬತ್ತಿಹೋಗಿವೆ. ಶುದ್ಧ ನೀರಿನ ಘಟಕಗಳು ಬಂದ್‌ ಆಗಿವೆ. ಜನರಿಗೆ ದೂರದಿಂದಲಾದರೂ ಕುಡಿಯುವ ನೀರು ತಂದು ಕೊಳ್ಳಬಹುದು ಆದರೆ ಜಾನುವಾರುಗಳು ಹಾಗೂ ನಿತ್ಯದ ಬಳಕೆಗೆ ನೀರಿಲ್ಲದಂತಾಗಿರುವದು ಬಹಳಷ್ಟು ಸಮಸ್ಯೆಯಾಗಿದೆ ಎಂದು ಕಡಕೊಳ ಪುಕೆ ನಿವಾಸಿ ಶ್ರೀಪಾದ ತಳಗಡೆ ತಿಳಿಸಿದ್ದಾರೆ. ಸಂಬಂದ ಪಟ್ಟ ಅಧಿಕಾರಿಗಳು ಕ್ರಮ ಜರುಗಿಸಬೇಕು ಇಲ್ಲಿಯ ಜನರ ನೀರಿನ ಸಮಸ್ಯೆ ಬಗೆ ಹರಿಸುವಂತೆ ಮನವಿ ಮಾಡಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ