ಬಳ್ಳಾರಿ ಏಪ್ರಿಲ್ ೨೨: ನಗರದ ಸಮೀಪದ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟಿರುವ ಕಪ್ಪಗಲ್ಲು ರಸ್ತೆ ಭಾಗದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಸ್ಥಳೀಯ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಪ್ರದೇಶದಲ್ಲಿ ನಿತ್ಯಂ ಶಾಲೆವರೆಗೆ ಸುಮಾರು ೨೩ ಲೇಔಟ್‌ಗಳು (ಕೃಷ್ಣ ಲೇಔಟ್, ಸದಾಶಿವನಗರ, ಆರ್ಚನಾ, ಅರ್ತಿತ, ನಾಯಿ ಸಾನ್ವಿ ಕೆ.ಬಿ.ಆರ್., ಬೃಂದಾವನ, ದೇವಸ್ ಕಾಲೋನಿ, ರಾಯಲ್ಸ್ ಥಾರ್ಟ್, ಮೇಘನಾ, ನೈರುತಿ ಬಡಾವಣೆ, ಕೋಟೇಶ್ ಬಡಾವಣೆ ಸೇರಿದಂತೆ) ಅಭಿವೃದ್ಧಿಯಾಗಿದ್ದು, ಸುಮಾರು ೧೧೫೦ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಅಲ್ಲದೆ, ಪ್ರಮುಖ ಶಿಕ್ಷಣ ಸಂಸ್ಥೆಗಳಾದ ನಿತ್ಯಂ ಶಾಲೆ, ಡೆಲ್ಲಿ ಪಬ್ಲಿಕ್ ಸ್ಕೂಲ್ ಹಾಗೂ ಶ್ರೀಮ್ಸ್ ಪಬ್ಲಿಕ್ ಶಾಲೆಗಳು ಈ ಭಾಗದಲ್ಲಿರುವುದರಿಂದ ವಿದ್ಯಾರ್ಥಿಗಳ ಸಂಚಾರವೂ ಹೆಚ್ಚಾಗಿದೆ.
ಆದರೆ, ಇಷ್ಟು ಜನಸಂಖ್ಯೆ ಇದ್ದರೂ ಈ ಪ್ರದೇಶದಲ್ಲಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಚರಂಡಿ ಸೌಲಭ್ಯಗಳಿಲ್ಲದಿರುವುದು ದೊಡ್ಡ ಸಮಸ್ಯೆಯಾಗಿದೆ. ಮಳೆಯಾದಾಗ ರಸ್ತೆಗಳ ಮೇಲೆ ನೀರು ನಿಂತು ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ನಿಂತ ನೀರಿನಿಂದ ಡೆಂಗ್ಯೂ, ಮಲೇರಿಯಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕುಡಿಯುವ ನೀರಿನ ಕೊರತೆಯಿಂದ ನಿವಾಸಿಗಳು ಹಾಗೂ ವಿದ್ಯಾರ್ಥಿಗಳು ಸುಮಾರು ೪ ಕಿಲೋಮೀಟರ್ ದೂರದ ಕೊಳವೆ ಬಾವಿಗಳ ಮೇಲೆ ಅವಲಂಬಿತರಾಗಿದ್ದಾರೆ. ಆದರೆ, ಅಲ್ಲಿ ದೊರೆಯುವ ನೀರಿನಲ್ಲಿ ಉಪ್ಪಿನಾಂಶ ಹೆಚ್ಚಿರುವುದರಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿರುವುದಾಗಿ ದೂರಲಾಗಿದೆ.
ಇದಲ್ಲದೆ, ಸದಾಶಿವನಗರದಲ್ಲಿ ಸುಮಾರು ಮೂರು ವರ್ಷಗಳ ಹಿಂದೆ ನಿರ್ಮಿಸಿದ ನೀರಿನ ಟ್ಯಾಂಕ್ ಇನ್ನೂ ಬಳಕೆಗೆ ಬಂದಿಲ್ಲ. ಟ್ಯಾಂಕ್ ನಿರ್ಮಾಣವಾದರೂ ಸಂಪರ್ಕ (ಕನೆಕ್ಷನ್) ನೀಡದೇ ಇರುವುದರಿಂದ ಅದು ನಿರುಪಯುಕ್ತವಾಗಿಯೇ ಉಳಿದಿದೆ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸ್ಥಳೀಯರು ಹಲವು ಬಾರಿ ಸಂಬಂಧಿತ ಅಧಿಕಾರಿಗಳಿಗೆ ಹಾಗೂ ಕಾರ್ಪೊರೇಷನ್‌ಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಿದ್ದಾರೆ.
ತ್ವರಿತ ಕ್ರಮಕ್ಕೆ ಮನವಿ: ಸ್ಥಳೀಯರು ಅಧಿಕಾರಿಗಳಿಗೆ ಮನವಿ ಮಾಡಿದ್ದು?
ಶೀಘ್ರದಲ್ಲೇ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು
ಚರಂಡಿ ವ್ಯವಸ್ಥೆ ನಿರ್ಮಿಸಿ ಸಮಸ್ಯೆ ಪರಿಹರಿಸಬೇಕು
ರಸ್ತೆಗಳು ಸೇರಿದಂತೆ ಇತರ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಬೇಕು
ಸಾರ್ವಜನಿಕರ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಕ್ರಮ ಕೈ