LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮೀಸಲಾತಿಗಾಗಿ ಹೋರಾಟ ಮಾಡಲು ನಮ್ಮದು ತಕರಾರಿಲ್ಲ: ಸಿಎಂ ಸಿದ್ಧರಾಮಯ್ಯ

ವಿಜಯಪುರ: "ಪಂಚಮಸಾಲಿಯವರು ಮೀಸಲಾತಿಗಾಗಿ ಹೋರಾಟ ಮಾಡಲು ನಮ್ಮದು ತಕರಾರಿಲ್ಲ. ಆದರೆ ಹೋರಾಟ ಸಂವಿಧಾನಿಕವಾಗಿ ಇರಬೇಕು. ಪಂಚಮಸಾಲಿ ಹೋರಾಟಗಾರರಿಗೆ ಬಿಜೆಪಿ ಟೋಪಿ ಹಾಕಿದೆ" ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು.


ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "2ಡಿ ಮೀಸಲಾತಿ ಕೊಟ್ಟು ಬಳಿಕ ಹೈಕೋರ್ಟ್​​​ಗೆ ಅಫಿಡವಿಟ್ ಹಾಕಿದವರು ಯಾರು? 2023ರಲ್ಲಿ ಅಫಿಡವಿಟ್​ ಹಾಕಲಾಗಿದೆ. ಆಗ ಇದೇ ಸ್ವಾಮೀಜಿ ಇದ್ದರು. 3ಬಿಯಲ್ಲಿ ಪಂಚಮಸಾಲಿಗಳಿದ್ದಾರೆ. ಹಿಂದುಳಿದ ವರ್ಗದಲ್ಲಿ ಎಷ್ಟು ಜಾತಿ ಇವೆ ಗೊತ್ತಾ? ಅದರಲ್ಲಿ ನಾಲ್ಕು ಕಟೆಗೆರಿ ಇವೆ. 1ಎ ನಲ್ಲಿ ಮೋಸ್ಟ್ ಬ್ಯಾಕ್​ವರ್ಡ್, 2ಎನಲ್ಲಿ ಕೋರ್ ಬ್ಯಾಕ್​ವರ್ಡ್, 3ಎನಲ್ಲಿ ಒಕ್ಲಲಿಗರು, 3ಬಿನಲ್ಲಿ ಲಿಂಗಾಯತರು ಇತರ ಲಿಂಗಾಯತರು ಬರುತ್ತಾರೆ. 2002ರಲ್ಲಿ ಎಸ್​.ಎಂ. ಕೃಷ್ಣ ಸಿಎಂ ಇದ್ದಾಗ ಇದೆಲ್ಲ ಆಗಿದೆ" ಎಂದು ತಿಳಿಸಿದರು.


"1992ರಲ್ಲಿ ಮೊಯ್ಲಿ ಸಿಎಂ ಇದ್ದಾಗ ಮುಸ್ಲಿಂರಿಗೆ 2ಬಿ ಮಾಡಿದ್ದಾರೆ. ಬಳಿಕ ಬಿಜೆಪಿಯವರು ಮುಸ್ಲಿಂನವರಿಗೆ ಕೊಟ್ಟಿದ್ದನ್ನು ರದ್ದು ಮಾಡಿ 2ಸಿ, 2ಡಿ ಮಾಡಿ ಅದರಲ್ಲಿನ ಶೇ.4ರ ಮೀಸಲಾತಿ ತೆಗೆದು ಇವರಿಗೆ ಕೊಟ್ಟಿದಾರೆ. ಆಗ ಯಾಕೆ ಇವರು ಪ್ರತಿಭಟನೆ ಮಾಡಲಿಲ್ಲ. ಈಗ ಅದೇ ಸರ್ಕಾರದವರು ಇವರಿಗೆ ಸಪೋರ್ಟ್ ಮಾಡುತ್ತಿದ್ದಾರೆ. ಮುಸ್ಲಿಂ ಮೀಸಲಾತಿ ಕಸಿದುಕೊಂಡಿದ್ದನ್ನು ಪ್ರಶ್ನಿಸಿ ರಸೂಲ್ ಎನ್ನುವವರು ಸುಪ್ರೀಂಕೋರ್ಟ್​ಗೆ ಹೋಗಿದ್ದರು. ಆಗ ಅಲ್ಲಿ ಇವರ ಪರ ವಕೀಲರು ನಾವು ಯಾವುದೇ ಕಾರಣಕ್ಕೂ ಬದಲಾವಣೆ ಮಾಡಲ್ಲ ಎಂದು ಹೇಳಿದ್ದರು. ಬಿಜೆಪಿಯವರು ಈಗ ಯಾಕೆ ಬೆಂಬಲ ಮಾಡುತ್ತಿದ್ದಾರೆ?" ಎಂದು ಪ್ರಶ್ನಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್