Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಯಗಳಿಸುವ ಸಂಪೂರ್ಣ ವಿಶ್ವಾಸ ನಮಗಿದೆ : ಬಾಬಾಸಾಹೇಬ ಪಾಟೀಲ

ಬೆಳಗಾವಿ. ಪ್ರತಿಷ್ಠಿತ ದಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ ಗೆ ಅ. 19 ರಂದು ಚುನಾವಣೆ ಪ್ರಯುಕ್ತ ನಮ್ಮ ಸಹೋದರ ನಾನಾಸಾಹೇಬ ಪಾಟೀಲ ಅವರನ್ನು ಕಿತ್ತೂರು ತಾಲೂಕಿನ ಸಹಕಾರಿ ಸಂಘಗಳ ವತಿಯಿಂದ ನಿರ್ದೇಶಕರ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು, ನಮ್ಮ ಕುಟುಂಬ ಮೊದಲಿನಿಂದಲೂ ಸಹಕಾರಿ ರಂಘದಲ್ಲಿ ಕಾರ್ಯ ಮಾಡಿದ್ದು, ಸಹೋದರ ನಾನಾಸಾಹೇಬ ಪಾಟೀಲ ಪಿಕೆಪಿಎಸ್ ಅಧ್ಯಕ್ಷರಾಗಿ, ಅನೇಕ ಸಂಘಗಳ ಸ್ಥಾಪನೆ, ಬೆಂಬಲಿಗರ ಆಯ್ಕೆಯಲ್ಲಿ ಕೆಲಸ ಮಾಡಿದ್ದು ನಮ್ಮನ್ನು ಸಹಕಾರಿ ಸಂಘದ ಪ್ರತಿನಿಧಿಗಳು ಬೆಂಬಲಿಸಲಿದ್ದಾರೆ. ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸಂಪೂರ್ಣ ಬೆಂಬಲ ನೀಡಿದ್ದಾರೆ. ವಿರೋಧಿಗಳ ಬಗ್ಗೆ ಹೇಳುವದು ಬೇಡ, ಬಾಲಚಂದ್ರ ಜಾರಕಿಹೊಳಿ ಬಣದ ಬಗ್ಗೆ ಮಾತು ಬೇಡ ನಮ್ಮ ಆಯ್ಕೆ ಗೆಲುವಿನ ಕಡೆ ಎಂದು ಚನ್ನಮ್ಮನ ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ಹೇಳಿದರು.
     ಅವರು ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ ಪ್ರಧಾನ ಕಚೇರಿಯಲ್ಲಿ ಸಹೋದರ ನಾನಾಸಾಹೇಬ ಪಾಟೀಲ ಅವರು ಕಿತ್ತೂರು ತಾಲೂಕ ವತಿಯಿಂದ ಡಿಸಿಸಿ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ನಂತರ ಪತ್ರಕರ್ತರೊಂದಿಗೆ  ಮಾತನಾಡಿ ಪ್ರತೇಕ ಕಿತ್ತೂರು ತಾಲೂಕ ರಚನೆ ಆದ ಮೇಲೆ ನಾವು ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ ಮಾಡ್ತಾ ಇದ್ದೇವೆ, ಬಾಲಚಂದ್ರ ಜಾರಕಿಹೊಳಿ ಬಣ ವಿರುದ್ಧ ಪ್ರಚಾರಕ್ಕೆ ಮಾಜಿ ಸಂಸದ ರಮೇಶ ಕತ್ತಿ ನಮಗೆ ಬೇಕಿಲ್ಲ. 60% ಜನ ಜಮೀನು ಇಲ್ಲದವರು ಇದ್ದಾರೆ ಅವರೇನು ಮಾಡಬೇಕು, ಸರ್ಕಾರದ ಹಣ ರೈತರಿಗೆ ಬಡ್ಡಿ ರಹಿತವಾಗಿ ರೈತರಿಗೆ ತಲುಪಿಸಬೇಕು, ಪಿಕೆಪಿಎಸ್ ಗಳಲ್ಲಿ ಪರದರ್ಶಕತೆ ಇರಬೇಕು ಎಂದರು.   ಈ ಸಂದರ್ಭದಲ್ಲಿ ಕಿತ್ತೂರು ಹಾಗೂ ಬೈಲಹೊಂಗಲ ತಾಲೂಕಿನ ಮುಖಂಡರು, ರೈತ ಮುಖಂಡರು, ಬೆಂಬಲಿಗರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ