ಕೊಪ್ಪಳ ಜೂನ್ 26 ತುಂಗಭದ್ರಾ ಅಣೆಕಟ್ಟಿನ ಎಲ್ಲಾ 33 ಹೊಸ ಕ್ರಸ್ಟ್ ಗೇಟ್‌ಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವ ನಿಮಿತ್ತ, ಮುನಿರಬಾದ್ ರಿಸರ್ವ್ ಪೊಲೀಸ್ ಕವಯಾತು ಮೈದಾನದಲ್ಲಿನ ಹೆಲಿಪ್ಯಾಡ್‌ಗೆ ಗುರುವಾರ (ಜೂ. 25ರಂದು) ಬಂದಿಳಿದ ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್‌ರೆಡ್ಡಿ ಅವರಿಗೆ ಕೊಪ್ಪಳ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು.
ಎ.ರೇವಂತ್ ರೆಡ್ಡಿ ಅವರೊಂದಿಗೆ ತೆಲಂಗಾಣ ನೀರಾವರಿ ಇಲಾಖೆ ಸಚಿವ ಎನ್.ಉತ್ತಮ್ ಕುಮಾರ್ ರೆಡ್ಡಿ ಸಹ ಆಗಮಿಸಿದ್ದರು. ಈ ವೇಳೆ ಶಾಸಕರಾದ ಬಸವರಾಜ ರಾಯರೆಡ್ಡಿ, ವಿಧಾನ ಪರಿಷತ್ ಶಾಸಕರಾದ ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪುರ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಂ, ಕೊಪ್ಪಳ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹೇಮಂತಕುಮಾರ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
****
