ಧಾರವಾಡ ,24 : ಚುನಾವಣಾ ಆಯೋಗವು ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಸೆಪ್ಟೆಂಬರ್ 22 ರಿಂದ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದು, ಧಾರವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ.
ಚುನಾವಣಾಧಿಕಾರಿಗಳು ಸೆಪ್ಟೆಂಬರ್ 29 ರಂದು ಅಧಿಸೂಚನೆ ಪ್ರಕಟಿಸುವರು. ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 6 ಕೊನೆಯ ದಿನವಾಗಿರುತ್ತದೆ. ಅಕ್ಟೋಬರ್ 7 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆ ದಿನ. ಅಕ್ಟೋಬರ್ 23 ರಂದು ಬೆಳಿಗ್ಗೆ 8 ರಿಂದ ಮಧ್ಯಾಹ್ನ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಅಕ್ಟೋಬರ್ 27ರಂದು ಮತ ಎಣಿಕೆ ನಡೆಯುತ್ತದೆ ಹಾಗೂ ಅಕ್ಟೋಬರ್ 31 ರಂದು ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಚುನಾವಣಾಧಿಕಾರಿ ಆಗಿರುವ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.