LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅಮಿತ್ ಶಾ ಭೇಟಿಯಾಗಿದ್ದೇಕೆ ಹೆಚ್​ಡಿ ದೇವೇಗೌಡ?

ಬೆಂಗಳೂರು, ಆಗಸ್ಟ್ 8: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡರು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅವರ ಕುಟುಂಬದ ರಕ್ಷಣೆಗೆ ಅವರು (ದೇವೇಗೌಡರು) ಹೋಗಲೇ ಬೇಕಲ್ಲವಾ? ಅಷ್ಟೇ ಅಲ್ಲದೆ, ನಮ್ಮ ವಿರುದ್ಧ ಪಟ್ಟಿ ಕೊಡುವುದಕ್ಕೆ ಹೋಗಿರಬಹುದು ಎಂದರು.

ನನ್ನನ್ನು ಹಾಗೂ ಸಿಎಂ ಸಿದ್ದರಾಮಯ್ಯರನ್ನು ಒಳಗೆ ಹಾಕಬೇಕೆಂದು ಏನೋ ಮಾಡುತ್ತಿದ್ದಾರೆ. ನಾನು ಇದಕ್ಕೆ ರೆಡಿ ಇದ್ದೇನೆ ಎಂದ ಡಿಕೆ ಶಿವಕುಮಾರ್, ಬಿಜೆಪಿ ಭ್ರಷ್ಟಾಚಾರದ ದಾಖಲೆಗಳನ್ನ ಬಿಡುಗಡೆ ಮಾಡುತ್ತೇವೆ. ದಾಖಲೆ ಬಿಡುಗಡೆಗೆ ದಿನ, ಘಳಿಗೆ ಕೂಡಿ ಬರಲಿ. ಅಕ್ರಮ ಬಗ್ಗೆ ಚರ್ಚೆ ಮಾಡಲು ಬಿಜೆಪಿಯವರು ರೆಡಿಯಾಗಿಲ್ಲ ಎಂದರು.

ಅವರ (ಕುಮಾರಸ್ವಾಮಿ) ಸಹೋದರನಿಗೆ ಆಸ್ತಿ ಹೇಗೆ ಬಂತು ಎಂದು ಹೇಳಿದ್ದೇನೆ. ಅದನ್ನು ಬಿಚ್ಚಿಡಬೇಕಲ್ಲವಾ? ನಾನು ದಲಿತರಿಗೆ ಅನ್ಯಾಯ ಮಾಡಿ ಆಸ್ತಿ ಮಾಡಿದೆ ಎಂದು ಆರೋಪ ಮಾಡುತ್ತಾರೆ. ಆ ಬಗ್ಗೆ ದಾಖಲೆಗಳನ್ನು ಪ್ರದರ್ಶಿಸಲಿ. ಬ್ಲಾಕ್ ಅಂಡ್ ವೈಟ್ ಟೀವಿ ಮಾಡಿಕೊಂಡಿದ್ದೆನಂತೆ. ಅದನ್ನು ಅಲ್ಲಿ ಬಂದು ವಿಚಾರಿಸಲಿ? ನಾವೆಲ್ಲಾ ಹುರುಳಿ, ಕಡಲೇಕಾಯಿ, ರಾಗಿಯನ್ನೇ ತಿಂದವರು. ಅದನ್ನು ಬೆಳೆದುಕೊಂಡು ಬಂದಿದ್ದೇವೆ. ಈಗಲೂ ಬೆಳೆಯುತ್ತಿದ್ದೇವೆ. ನಮ್ಮ ಆಸ್ತಿ ಎಷ್ಟಿದೆ ಅನ್ನೋದನ್ನ ಬಂದು ಕೇಳಲಿ ಎಂದು ಡಿಕೆ ಶಿವಕುಮಾರ್ ಸವಾಲು ಹಾಕಿದರು.

ಸಿಎಂ, ಡಿಸಿಎಂರನ್ನು ಚಕ್ರವ್ಯೂಹದಲ್ಲಿ ಸಿಲುಕಿಸುತ್ತೇವೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನೋಡಿ ಪಾ, ಅದೇನೋ ಹೇಳ್ತಾರಲ್ಲ. ದಿನಾ ಸಯೋರಿಗೆ ಅಳುವವರು ಯಾರು ಅಂತ. ಅದೇ ರೀತಿ, ಇವರದೆಲ್ಲಾ ಗೋಳು ಇದ್ದಿದ್ದೇ. ಇವರ ವಿರುದ್ಧ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಮುಂದಕ್ಕೂ ಹೋರಾಟ ಮಾಡುತ್ತೇವೆ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್