ಬಳ್ಳಾರಿ, ಏ.24.: ಮುಖ್ಯ ಮಂತ್ರಿ ಸಿದ್ದರಾಮಯ್ಯ ಬೆಂಬಲಿಗರು ಒಂದು ಕಡೆ, ಡಿಸಿಎಂ ಒಂದು ಕಡೆ ಈ ಇಬ್ಬರು ಸಿಎಂ ಮತ್ತು ಡಿಸಿಎಂ ಗುಂಪು ಮಾಡಿಕೊಂಡು ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ ಇತ್ತ ಉಪಮುಖ್ಯಮಂತ್ರಿ ಡಿಕೆಶಿ ಮುಖ್ಯಮಂತ್ರಿ ಪದವಿಗಾಗಿ ಶತ ಪ್ರಯತ್ನ ಮಾಡುತ್ತಾ ಕೇಂದ್ರದ ನಾಯಕರ ಮೇಲೆ ಒತ್ತಡ ಹಾಕುತ್ತಿದ್ದಾರೆ ಇದೆಲ್ಲವನ್ನು ಗಮನಿಸುತ್ತಿದ್ದಾಗ ಬರುವ ಮೂರ್ನಾಲ್ಕು ತಿಂಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಬಹಳಷ್ಟು ಬದಲಾವಣೆ ಆಗಲಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಖಾಸಗಿ ಕಾರ್ಯಕ್ರಮದ ನಿಮಿತ್ತ ಬಳ್ಳಾರಿಗೆ ಆಗಮಿಸಿದ್ದ ಅವರು ಇಂದು ನಗರದ ಸರ್ಕಾರಿ ಅತಿಥಿಗೃಹದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿ ದಾವಣಗೆರೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನ ಅನೇಕ ಮುಸ್ಲೀಂ ನಾಯಕರು ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆಂದು ಪಕ್ಷದಿಂದ ಹೊರ ಹಾಕಿದ್ದಾರೆ. ಅದಕ್ಕೆ ಮುಸ್ಲಿ ಗುರುಗಳು ಅದನ್ನು ವಿರೋಧಿಸಿ ಎಚ್ಚರಿಕೆ ನೀಡಿದ್ದಾರೆ. ಇದನ್ನು ಪಕ್ಷದ ಮುಖಂಡರಾರು ಖಂಡಿಸಿಲ್ಲ.
ಮುಸ್ಲೀಂರು ಯುಪಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಬೇರೆ ಪಕ್ಷ ಬೆಂಬಲಿಸಿದ್ದಾರೆ. ಈಗ ನಡೆದಿರುವ ರಾಜ್ಯಗಳ ಚುನಾವಣೆ ಫಲಿತಾಂಶದಿಂದ ಕಾಂಗ್ರೆಸ್ ಅವಸಾನದ ದಿಕ್ಕಿನಲ್ಲಿ ಸಾಗಲಿದೆಂದರು.
ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗಳು ಹಾಸ್ಯಾಸ್ಪದವಾಗಿವೆ. ಅವರು ದೇಶದ ಕ್ಷಮೆ ಕೇಳಬೇಕು ಎಂದ ಅವರು, ಮಹಿಳಾ ಮೀಸಲಾತಿ ಜಾರಿಗೆ ಕಾಂಗ್ರೆಸ್ ವಿರೋಧ ಮಾಡಿದ್ದು ಮಹಿಳೆಯರಿಗೆ ಮಾಡಿದ ಅಪಮಾನ ಎಂದರು.