Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ




ವಿಜಯಪುರ,ಮಾ.೨೫(ಕರ್ನಾಟಕ ವಾರ್ತೆ): ಭಾರತದಲ್ಲಿ ಗ್ರಾಹಕರ ಹಕ್ಕುಗಳನ್ನು ರಕ್ಷಿಸಲು ಜಾರಿಗೆ ತಂದಿರುವ ಅoಟಿsumeಡಿ Pಡಿoಣeಛಿಣioಟಿ ಂಛಿಣ,೨೦೧೯ ಮಹತ್ವದ ಕಾಯ್ದೆಯಾಗಿದ್ದು, ಗ್ರಾಹಕರಿಗೆ ನ್ಯಾಯಸಮ್ಮತ ಸೇವೆ ಮತ್ತು ಸುರಕ್ಷಿತ ಉತ್ಪನ್ನಗಳನ್ನು ಒದಗಿಸುವುದನ್ನು ಖಚಿತಪಡಿಸುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ ಹೇಳಿದರು.

ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಗ್ರಾಹಕರ ದೂರು ಪರಿಹಾರ ವೇದಿಕೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರ, ಕೆಎಫ್ ಸಿಎಸ್ಸಿ ನಿಗಮ ವಿಜಯಪುರ, ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ನ್ಯೂ ಸಂಸ್ಥೆಯ ಸಹಯೋಗದಲ್ಲಿ ಬುಧವಾರ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ನಡೆದ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಈ ಕಾಯ್ದೆಯಡಿ ಗ್ರಾಹಕರಿಗೆ ಮುಖ್ಯವಾಗಿ ಸುರಕ್ಷತಾ ಹಕ್ಕು, ಮಾಹಿತಿ ಪಡೆಯುವ ಹಕ್ಕು, ಆಯ್ಕೆ ಮಾಡುವ ಹಕ್ಕು, ಕೇಳಿಸಿಕೊಳ್ಳುವ ಹಕ್ಕು, ಪರಿಹಾರ ಪಡೆಯುವ ಹಕ್ಕು ಮತ್ತು ಗ್ರಾಹಕ ಶಿಕ್ಷಣ ಹಕ್ಕು ಪ್ರಮುಖವಾಗಿವೆ. ಇವುಗಳ ಮೂಲಕ ಗ್ರಾಹಕರು ಮೋಸ, ಕಳಪೆ ಗುಣಮಟ್ಟದ ವಸ್ತುಗಳು ಹಾಗೂ ಸೇವೆಗಳ ವಿರುದ್ಧ ಕಾನೂನುಬದ್ಧವಾಗಿ ಹೋರಾಡಲು ಅವಕಾಶ ದೊರಕುತ್ತದೆ. ಈ ಕಾಯ್ದೆಯ ಪ್ರಕಾರ, ಗ್ರಾಹಕರ ದೂರುಗಳನ್ನು ಶೀಘ್ರವಾಗಿ ಪರಿಹರಿಸಲು ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಗ್ರಾಹಕ ವಿವಾದ ಪರಿಹಾರ ಆಯೋಗಗಳನ್ನು ಸ್ಥಾಪಿಸಲಾಗಿದೆ. ಸುರಕ್ಷಿತ ಉತ್ಪನ್ನಗಳು, ಆತ್ಮ ವಿಶ್ವಾಸದ ಗ್ರಾಹಕರು, ಗ್ರಾಹಕನೇ ರಾಜ- ನಿಮ್ಮ ಹಕ್ಕುಗಳನ್ನು ತಿಳಿದು ಬಳಸಿ ಎಂಬ ಘೋ?ವಾಕ್ಯದೊಂದಿಗೆ  ಹಕ್ಕುಗಳ ಉಲ್ಲಂಘನೆ ಸಂದರ್ಭಗಳಲ್ಲಿ ಈ ಆಯೋಗಗಳಿಗೆ ದೂರು ಸಲ್ಲಿಸಿ ನ್ಯಾಯ ಪಡೆಯಬಹುದು. ಇತ್ತೀಚೆಗೆ ಆನ್‌ಲೈನ್ ವ್ಯಾಪಾರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಗ್ರಾಹಕರಿಗೆ ಪಾರದರ್ಶಕ ಮಾಹಿತಿ ನೀಡುವುದು ಕಡ್ಡಾಯವಾಗಿದೆ. ಸರ್ಕಾರವು ಗ್ರಾಹಕರಲ್ಲಿ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಜನರು ತಮ್ಮ ಹಕ್ಕುಗಳನ್ನು ತಿಳಿದುಕೊಳ್ಳುವಂತೆ ಕರೆ ನೀಡಿದರು.. ಗ್ರಾಹಕರು ಜಾಗೃತರಾಗಿದ್ದು, ಯಾವುದೇ ಅನ್ಯಾಯ ಎದುರಾದಲ್ಲಿ ತಕ್ಷಣ ದೂರು ಸಲ್ಲಿಸುವುದು ಹಾಗೂ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ ಮಾತನಾಡಿ ನಮ್ಮ ದಿನನಿತ್ಯದ ಕಾರ್ಯ ಚಟುವಟಿಕೆಗಳಿಗೆ ಅಗತ್ಯ ವಸ್ತುಗಳನ್ನು ಖರಿದಿಸುತ್ತಿದ್ದು, ಖರಿದಿಸಿದ ವಸ್ತುವಿಗೆ ನಾವು ಗ್ರಾಹಕರಾಗುತ್ತೇವೆ. ನಮಗೆ ಖರೀದಿಸಿದ ವಸ್ತುವಿನಲ್ಲಿ ಮೋಸವಾಗಿದೆ ಅಂದು ತಿಳಿದಾಗ ನಾವು ಪರಿಹಾರಕ್ಕಾಗಿ ಈ ವೇದಿಕೆ ಬಂದು ದೂರನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ. ನಮ್ಮ ದೇಶ ಕೃಷಿ ಪ್ರಧಾನವಾದ ದೇಶ ಈ ಕಾಯಿದೆ ಕುರಿತು ರೈತರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು ಪರಿಹಾರ ಒದಗಿಸುವಲ್ಲಿ ಬಹಳ ಸಹಕಾರಿಯಾಗಲಿದೆ.

ಮೋಸವಾಗಿದ್ದು ಕಂಡು ಬಂದಲ್ಲಿ ರೈತರು ಕೂಡ ಮುಂದೆ ಬಂದು ನೇರವಾಗಿ ಈ ವೇದಿಕೆಗೆ ಬಂದಲ್ಲಿ ನಾವು ಕೂಡ ಪರಿಹಾರ ಒದಗಿಸಲು ಕ್ರಮವಹಿಸಲಾಗುವುದು.

ಜಿಲ್ಲಾ ಗ್ರಾಹಕರ ದೂರು ಪರಿಹಾರ ವೇದಿಕೆ ಸದಸ್ಯರಾದ ಕಮಲ ಕಿಶೋರ ಜೋಶಿ ಮಾತನಾಡಿ ಮಾರುಕಟ್ಟೆಯಲ್ಲಿ ನಾವು ಖರೀದಿಸುವ ಪ್ರತಿಯೊಂದು ವಸ್ತುವಿನ ಕುರಿತು ನಿಖರವಾದ ಮಾಹಿತಿ ಪಡೆದುಕೊಳ್ಳಬೇಕು. ಪ್ರತಿ ವಸ್ತುವಿನ ಮೇಲೆ ಕನಿ? ದರ, ಮುಕ್ತಾಯದ ದಿನಾಂಕ ಹಾಗೂ ಉತ್ಪಾದನೆ ಕುರಿತು ನಮೂದಿಸಲಾಗಿರುತ್ತದೆ. ಒಂದು ವೇಳೆ ಇದು ಯಾವುದು ಇಲ್ಲದಿದ್ದಲ್ಲಿ ಗ್ರಾಹಕರಾದ ನಾವು ಅಂಗಡಿ ಮಾಲಿಕರನ್ನು ಪ್ರಶ್ನಿಸಿ ಅವರಿಂದ ಸಮರ್ಪಕ ಮಾಹಿತಿ ಪಡೆದುಕೊಳ್ಳಬೇಕು ಯಾವುದೇ ನ್ಯಾಯವಾದಿಗಳ ಸಹಾಯ ಪಡೆಯದೆ ಮದ್ಯವರ್ತಿಗಳಿಲ್ಲದೆ ನೇರವಾಗಿ ಈ ವೇದಿಕೆಗೆ ಬಂದು ದೂರನ್ನು ನೀಡಬಹುದಾಗಿದೆ.

 ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಹಿರಿಯ ನ್ಯಾಯವಾದಿಗಳಾದ ಎಂ.ಜಿ ಮಠಪತಿ ಮಾತನಾಡಿ ಯಾವುದೇ ವಸ್ತು ಖರೀದಿಸಿದಲ್ಲಿ ಅದರ ಗುಣಮಟ್ಟ, ಸುರಕ್ಷತೆ ನಾವು ಮೊದಲು ಅರಿಯಬೇಕು ಅಂದಾಗ ನಾವು ಗ್ರಾಹಕರಾಗುತ್ತೇವೆ. ಅದು ನಮ್ಮ ಹಕ್ಕು ಕೂಡ ಆಗಿದೆ. ಖರೀದಿಸಿದ ವಸ್ತುವಿನಲ್ಲಿ ಮೋಸ ಹಾಗೂ ತೊಂದರೆಗಳಾದಲ್ಲಿ ಪರಿಹಾರಕ್ಕಾಗಿ ಈ ಗ್ರಾಹಕರ ವೇದಿಕೆಯು ತಮಗೆ ಎಲ್ಲ ರೀತಿಯ ಸಹಾಯ ಸಹಕಾರ ನೀಡಿ ದೂರಿನನ್ವಯ ಪರಿಹಾರ ನೀಡಲು ಕ್ರಮ ವಹಿಸಲಾಗುವುದು.

ಜಿಲ್ಲಾ ಗ್ರಾಹಕರ ದೂರು ಪರಿಹಾರ ವೇದಿಕೆ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಗಲಗಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆಹಾರ ಸುರಕ್ಷತಾ ಅಧಿಕಾರಿಗಳಾದ ಆರ್.ಎಸ್ ಬಿರಾದಾರ ವಂದಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಉಪ ಕಾಯದರ್ಶಿ ಪ್ರಕಾಶ ವಡ್ಡರ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಾದ ವಿಜಯಕುಮಾರ ಪಾಟೀಲ, ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಅಧ್ಯಕ್ಷರಾದ ಎಸ್.ಎಮ್ ಕರೆಕಲ್ಲ,ಕೆ.ಎಸ್.ಎಫ್.ಸಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಡಿ.ಆರ್ ನಾಯ್ಕೋಡಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು, ನ್ಯಾಯವಾದಿಗಳು, ಪಡಿತರ ವಿತರಕರು ಹಾಗೂ ಇತರರು ಉಪಸ್ಥಿತರಿದ್ದರು.

(ಫೋಟೋ ಲಗತ್ತಿಸಿದೆ. ಸಿ-೧ರಿಂದ ಸಿ-೫ರವರೆಗೆ)
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ