Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿ. 29 ರಂದು ವಿಶ್ವಮಾನವ ದಿನಾಚರಣೆ ಕಾರ್ಯಕ್ರಮ

ಕೊಪ್ಪಳ ಡಿಸೆಂಬರ್ 27.,:- ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರಕವಿ ಕುವೆಂಪುರವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮವನ್ನು ಡಿಸೆಂಬರ್ 29 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಬಿಸಾಬ ದೋಟಿಹಾಳ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಶ್ರೀನಿವಾಸ ಗುಪ್ತಾ, ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಉಪಸ್ಥಿತರಿರುವರು.


ವಿಶೇಷ ಆಹ್ವಾನಿತರಾಗಿ ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ಮೋಹನರಾಜ್ ಅವರು ಭಾಗವಹಿಸುವರು. ಕಾರ್ಯಕ್ರಮದ ಅಂಗವಾಗಿ ಕೊಪ್ಪಳದ ಸಾಹಿತಿಗಳಾದ ಸಾವಿತ್ರಿ ಮುಜುಮ್‌ದಾರ್ ಅವರು ವಿಶೇಷ ಉಪನ್ಯಾಸ ನೀಡುವರು.
ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಪಾಲ್ಗೊಳ್ಳುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*