ಮುದ್ದೇಬಿಹಾಳ: ವಿಶ್ವ ಸೊಳ್ಳೆ ದಿನಾಚರಣೆಯನ್ನು ಕುಂಟೋಜಿ ಗ್ರಾಮದ ಶ್ರೀ ಬಸವೇಶ್ವರ ಪ್ರೌಢ ಶಾಲೆಯಲ್ಲಿ ಆಚರಿಸಲಾಯಿತು ವಿಶ್ವ ಸೊಳ್ಳೆ ದಿನಾಚರಣೆಯ ಕುರಿತು ಪ್ರಾಥಮಿಕ ಆರೋಗ್ಯ ಕೇಂದ್ರ ಗರಸಂಗಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ ಎಸ್ ಗೌಡರ ಮಾತನಾಡಿ ವಿಶ್ವ ಸೊಳ್ಳೆ ದಿನವನ್ನು ಪ್ರತಿ ವರ್ಷ ಆಗಸ್ಟ್ 20 ರಂದು ಆಚರಿಸಲಾಗುತ್ತದೆ. ಈ ದಿನವನ್ನು ಸೊಳ್ಳೆಗಳಿಂದ ಹರಡುವ ರೋಗಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಈ ರೋಗಗಳನ್ನು ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳಲು ಮೀಸಲಿಡಲಾಗಿದೆ. 1897 ರಲ್ಲಿ ಸರ್ ರೊನಾಲ್ಡ್ ರಾಸ್ ಅವರು ಸೊಳ್ಳೆಗಳು ಮಲೇರಿಯಾ ರೋಗವನ್ನು ಹರಡುತ್ತವೆ ಎಂದು ಕಂಡುಹಿಡಿದರು, ಆ ಆವಿಷ್ಕಾರವನ್ನು ನೆನಪಿಗಾಗಿ ಈ ದಿನವನ್ನು ವಿಶ್ವ ಸೊಳ್ಳೆ ದಿನ ಎಂದು ಕರೆಯುತ್ತಾರೆ ಎಂದು ಘೋಷಿಸಿದರು. ಮಲೇರಿಯಾವನ್ನು ಹರಡುವುದರ ಜೊತೆಗೆ ಸೊಳ್ಳೆಗಳು ಜಿಕಾ, ಡೆಂಗ್ಯೂ,, ಚಿಕೂನ್ಗುನ್ಯಾ, ಹಳದಿ ಜ್ವರ, ಫೈಲೇರಿಯಾ ಇತರ ಮಾರಣಾಂತಿಕ ರೋಗ ಹರಡುತ್ತದೆ ಇದರ ನಿಯಂತ್ರಣಕ್ಕಾಗಿ ಪ್ರತಿಯೊಬ್ಬರು ಸ್ವಚ್ಛತೆಗೆ ಗಮನಹರಿಸಬೇಕು ಮಳೆಗಾಲ ಪ್ರಾರಂಭವಾಗಿದ್ದು, ಹಳ್ಳ ಕೊಳ್ಳಗಳಲ್ಲಿ ನೀರು ನಿಲ್ಲುತ್ತದೆ. ಹೆಚ್ಚಾಗಿ ಸೊಳ್ಳೆಗಳು ನಿಂತ ನೀರಿನಲ್ಲಿ ಉತ್ಪತ್ತಿಯಾಗುತ್ತವೆ ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಸೊಳ್ಳೆಗಳ ಸಂತಾನೋತ್ಪತ್ತಿ ನಿಯಂತ್ರಣ ಮಾಡುವುದು ಬಹಳ ಮುಖ್ಯವಾಗಿರುತ್ತದೆ ಕಾರಣ ಮನೆಯಲ್ಲಿರುವ ತೊಟ್ಟಿ, ಬ್ಯಾರೆಲ್, ಡ್ರಂಗಳಲ್ಲಿನ ನೀರನ್ನು ವಾರಕ್ಕೊಮ್ಮೆ ಖಾಲಿ ಮಾಡಿ, ಉಜ್ಜಿ ತೊಳೆದು ಪುನ: ನೀರು ತುಂಬಿಸುವುದು ಮತ್ತು ತೊಟ್ಟಿ, ಬ್ಯಾರೆಲ್, ಡ್ರಂಗಳಲ್ಲಿ ಮಳೆ ನೀರು ಶೇಖರಣೆಯಾಗದಂತೆ ಎಚ್ಚರಿಕೆ ವಹಿಸಬೇಕು. ಮನೆಯ ಸುತ್ತ ಮುತ್ತ ಬೀಸಾಡಿರುವ ವಸ್ತುಗಳಲ್ಲಿ ಮಳೆ ನೀರು ಶೇಖರಣೆಯಾಗದಂತೆ ಎಚ್ಚರಿಕೆ ವಹಿಸಬೇಕು ಡೆಂಗ್ಯೂ ಹರಡುವುದನ್ನು ನಿಯಂತ್ರಿಸುವುದು ಎಲ್ಲರ ಜವಾಬ್ದಾರಿಯಾಗಿದೆ "ಆರೋಗ್ಯ ಇಲಾಖೆಯಿಂದ ಲಾರ್ವಾ ಸಮೀಕ್ಷೆಯನ್ನು ನಡೆಸುವುದರ ಜೊತೆಗೆ ಜನರಿಗೆ ಆರೋಗ್ಯ ಶಿಕ್ಷಣ ನೀಡುತ್ತಿದೆ ಮಳೆಗಾಲದಲ್ಲಿ ಸೋಂಕು ಹೆಚ್ಚಾಗಿ ಹರಡುವುದರಿಂದ ಇವುಗಳನ್ನು ಶುಚಿಗೊಳಿಸಿ ಸೊಳ್ಳೆ ಮೊಟ್ಟೆ ಇಡಲು ಅವಕಾಶವಿರದಂತೆ ಸಾರ್ವಜನಿಕರು ನೋಡಿಕೊಳ್ಳಬೇಕು. ಹಗಲಿನಲ್ಲಿ ಸೊಳ್ಳೆ ಕಚ್ಚದಂತೆ ಎಚ್ಚರ ವಹಿಸಬೇಕು. ನೀರು ಶೇಖರಣಾ ತೊಟ್ಟಿ, ಟ್ಯಾಂಕ್ಗಳ ಮುಚ್ಚಳವನ್ನು ಭದ್ರವಾಗಿ ಮುಚ್ಚಬೇಕು. ಪಾತ್ರೆ ಹಾಗೂ ಬಿಂದಿಗೆಗಳಲ್ಲಿ ಹೆಚ್ಚು ದಿನ ನೀರು ಸಂಗ್ರಹಿಸಿಡಬಾರದು. ಮನೆಯ ಸುತ್ತಲು ಹಾಗೂ ತಾರಸಿ ಮೇಲೆ ನೀರು ನಿಲ್ಲದಂತೆ ಎಚ್ಚರ ವಹಿಸಿದರೆ ಸೊಳ್ಳೆಗಳಿಂದ ಹರಡುವ ರೋಗಗಳನ್ನು ತಡೆಯಲು ಸಾಧ್ಯ ಎಂದರು ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದ್ದಿ ಎಸ್ ಬಿ ಹೂಗಾರ ಶಾಲೆಯ ಮುಖ್ಯ ಶಿಕ್ಷಕ ಇಂದಯ್ಯ ಹಿರೇಮಠ ಸಹ ಶಿಕ್ಷಕರಾದ ಎಸ್ ವ್ಹಿ ಹವಾಲ್ದಾರ್ ಎನ್ ಆರ್ ಮಕಂದಾರ ಎಚ್ ಎಂ ಕೊಣ್ಣೂರ ಎನ್ ಎಂ ಮುದಗಲ್ಲ ಬಿ ಎಂ ಪಾಟೀಲ್ ಎಸ್ ಜಿ ಯರನಾಳ ಹಾಗೂ ಆಶಾ ಕಾರ್ಯಕರ್ತೆಯರು ವಿದ್ಯಾರ್ಥಿಗಳು ಹಾಜರಿದ್ದರು