Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವ ಯೋಗ ದಿನಾಚರಣೆ 


ರಾಮದುರ್ಗ,ಜೂ,೨೨: ಸ್ಥಳೀಯ ಮಹರ್ಷಿ ಪತಂಜಲಿ ಯೋಗ ಪ್ರತಿಷ್ಠಾನ, ಭಾರತ ಸ್ವಾಭಿಮಾನ ಟ್ರಸ್ಟ್, ಮಹಿಳಾ ಪತಂಜಲಿ ಯೋಗ ಪ್ರತಿಷ್ಠಾನ ಸೇರಿದಂತೆ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು.
ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ವಿರಕ್ತಮಠ ಟ್ರಸ್ಟ್ ಅಧ್ಯಕ್ಷ ಪ್ರದೀಪ ಪಟ್ಟಣ ಹಾಗೂ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಮಲ್ಲಣ್ಣ ಯಾದವಾಡ ಜಂಟಿಯಾಗಿ ಉದ್ಘಾಟಿಸಿದರು.
ನಂತರ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಮಲ್ಲಣ್ಣ ಯಾದವಾಡ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು ಯೋಗವನ್ನು ಇಡೀ ವಿಶ್ವಕ್ಕೆ ಸಾರುವ ಮೂಲಕ ಜೂನ್ ೨೧ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಗುವಂತೆ ಮಾಡುವ ಮೂಲಕ ನಮ್ಮ ಭಾರತದ ಕಿರ್ತಿಯನ್ನು ಶಿಖರಕೆರುವಂತೆ ಮಾಡಿದ್ದಾರೆ. ಎಲ್ಲರೂ ಯೋಗಭ್ಯಾಸ ಮಾಡುವ ಮೂಲಕ ತಮ್ಮ ಆರೋಗ್ಯವನ್ನು ರಕ್ಷಿಸಿಕೊಳ್ಳಬೇಕು ಎಂದು ಹೇಳಿದರು.
ವಿರಕ್ತಮಠ ಟ್ರಸ್ಟ್ ಅಧ್ಯಕ್ಷ ಪ್ರದೀಪ ಪಟ್ಟಣ ಮಾತನಾಡಿ, ಯೋ ಮಾಡುವದರಿಂದ ಮನಷ್ಯನ ಹಲವಾರು ಕಾಯಿಲೆಗಳು ದೂರಾಗಲಿವೆ. ಆದ್ದರಿಂದ ಪ್ರತಿ ನಿತ್ಯ ಸ್ವಲ್ಪ ಸಮಯವನ್ನಾದರೂ ಯೋಗ ಮಾಡುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಸಿ.ಬಿ. ಪಾಟೀಲ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಶೇಷಪ್ಪ ಪೋತರಡ್ಡಿ, ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ಆನಂದ ನಾಯಕ, ಬ್ರಹ್ಮಕುಮಾರಿ ಆಶ್ರಮದ ಮಾತೆ ಮಹಾದೇವಿ ಹಾಲಭಾವಿ, ಮಹರ್ಷಿ ಪತಂಜಲಿ ಯೋಗ ಪ್ರತಿಷ್ಠಾನದ ಬಿ.ಎಲ್. ಸಂಕನಗೌಡ್ರ, ವೆಂಕಟೇಶ ಹಿರೇರಡ್ಡಿ, ರಾಜೇಶ ಬೀಳಗಿ, ಯೋಗ ಶಿಕ್ಷಕ ರೇವಪ್ಪ ಕೊಟೂರ, ಚಂದ್ರು ಮಾಳದಕರ, ಪ್ರವೀಣ್ ಪತ್ತೆಪುರ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಹರ್ಷಿ ಪತಾಂಜಲಿ ಯೋಗ ಪ್ರತಿಷ್ಠಾನದ ಯೋಗ ಗುರು ಆರ್.ಎಸ್. ಕೋಟೂರ್ ಎಲ್ಲ ಯೋಗ ಶಿಬಿರಾರ್ಥಿಗಳಿಗೆ ಯೋಗದ ತರಬೇತಿ ನೀಡಿದರು. ಈ ಸಂದರ್ಭದಲ್ಲಿ ಮಹರ್ಷಿ ಪತಾಂಜಲಿ ಯೋಗ ಪ್ರತಿಷ್ಠಾನದಿಂದ ಅನೇಕರನ್ನು ಸತ್ಕರಿಸಿದರು. ಇದೇ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಮಲ್ಲಣ್ಣ ಯಾದವಾಡ ಅವರು ಯೋಗ ಗುರು ಆರ್.ಎಸ್. ಕೋಟೂರ್ ಹಾಗೂ ಯೋಗ ಪ್ರತಿಷ್ಠಾನದ ಪದಾಧಿಕಾರಿಗಳನ್ನು ಸತ್ಕರಿಸಿದರು. ಅಲ್ಲದೇ ವೇದಿಕೆಯ ಮೇಲಿದ್ದ ಎಲ್ಲ ಗಣ್ಯರು ಸಸಿಗಳನ್ನ ಹಂಚುವ ಮೂಲಕ ಪರಿಸರ ಜಾಗೃತಿ ಮೂಡಿಸಿದರು.

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ