Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭರತ ಹುಣ್ಣಿಮೆಗೆ ಸಜ್ಜುಗೊಂಡಿರುವ ಯಲ್ಲಮ್ಮನ ಗುಡ್ಡ

ಬೆಳಗಾವಿ : ಕರ್ನಾಟಕ, ಗೋವಾ, ಮಹಾರಾಷ್ಟ್ರ ಸೇರಿದಂತೆ ಲಕ್ಷಾಂತರ ಭಕ್ತರ ಆರಾಧ್ಯ ದೇವತೆ ಸವದತ್ತಿಯ ಎಲ್ಲಮ್ಮನ ಗುಡ್ಡ ಸುಕ್ಷೇತ್ರವು ಪ್ರಾಧಿಕಾರದ ವಿಶೇಷ ಮುತುವರ್ಜಿಯಿಂದ ಬಣದ ಹುಣ್ಣಿಮೆಯನ್ನು ಯಶಸ್ವಿಗೊಳಿಸಲು ಸಕಲ ಸೌಲಭ್ಯಗಳೊಂದಿಗೆ ಸಜ್ಜುಗೊಂಡಿದೆ.
ಈ ಕುರಿತು ನಡೆದ ಅಧಿಕಾರಿಗಳ ಪೂರ್ವಭಾವಿ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಸಿದ್ಧತೆಗಳ ಕುರಿತು ಮಾಹಿತಿ ನೀಡಿದ ಶ್ರೀ ರೇಣುಕಾ ಎಲ್ಲಮ್ಮ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ. ಸಿದ್ದು ಹುಲ್ಲೋಳಿ, ಚಳಿಗಾಲವಿರುವುದರಿಂದ ಭಕ್ತಾದಿಗಳಿಗಾಗಿ 28 ಸ್ನಾನಗ್ರಹಗಳಲ್ಲಿ ಬಿಸಿನೀರಿನ ವ್ಯವಸ್ಥೆಯನ್ನು ಮಾಡಲಾಗಿದೆ.
ರಾತ್ರಿ ಹೊತ್ತು ಭಕ್ತರಿಗೆ ಪ್ರಖರ ಬೆಳಕಿಗಾಗಿ 41 ಹೈ ಮಾಸ್ಟ್ ಲೈಟ್ ವ್ಯವಸ್ಥೆ ಮಾಡಲಾಗಿದೆ.
ಭಕ್ತರಿಗೆ ಅನುಕೂಲವಾಗಲು 50 ಕಡೆ ಚಾರ್ಜಿಂಗ್ ಪಾಯಿಂಟ್ ಗಳನ್ನು ಗುರುತು ಮಾಡಲಾಗಿದೆ. ವಾಹನಗಳ ಸುಗಮ ಸಂಚಾರ ಮತ್ತು ನಿಲುಗಡೆಗಾಗಿ ಮಾರ್ಗ ಸೂಚಿ ಮಾಡಲಾಗಿದೆ. ಚಕ್ಕಡಿಗಳಲ್ಲಿಯೂ ಹೆಚ್ಚಿನ ಸಂಖ್ಯೆಯ ಭಕ್ತರು ಬರುವುದರಿಂದ ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.
ಭಕ್ತಾದಿಗಳಿಗೆ ಅಲ್ಲಲ್ಲಿ ಕುಡಿಯುವ ನೀರಿನ ಅರವಟ್ಟಿಗೆಗಳನ್ನು ನಿರ್ಮಿಸಲಾಗಿದೆ. ಬಂದೋಬಸ್ತಗಾಗಿ ಸಾವಿರ ಪೊಲೀಸ್ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಾಗಿದೆ. ವಿಶೇಷವಾಗಿ ಭಕ್ತಸ್ನೇಹಿ ಸಂಪರ್ಕ ಕೇಂದ್ರ ತೆರೆಯಲಾಗುತ್ತಿದ್ದು, ಈ ಮೂಲಕ ಮಾಹಿತಿ ನೀಡುವುದು ಸೇರಿದಂತೆ ಕೇಂದ್ರವನ್ನು ಸಂಪರ್ಕಿಸುವ ಭಕ್ತರ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಸೂಚಿಸಲಾಗುವುದು.
ಬೆಳಗಿನ ಹಾಗೂ ಸಂಜೆಯ ಪೂಜಾ ಸಮಯ ಹೊರತುಪಡಿಸಿ ಉಳಿದಂತೆ ಎಲ್ಲಾ ಸಮಯದಲ್ಲೂ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗುವುದು. ಒಟ್ಟಾರೆ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಾಧಿಕಾರವು ಅಗತ್ಯ ಏರ್ಪಾಡು ಮಾಡಿಕೊಂಡಿದೆ.
ಕ್ಷೇತ್ರಕ್ಕೆ ಆಗಮಿಸುವ ಭಕ್ತರು ಹಾಗೂ ಕರ್ತವ್ಯನಿರತ ಸಿಬ್ಬಂದಿ ಪರಸ್ಪರ ಸಮನ್ವಯತೆ ಮತ್ತು ಸೌಜನ್ಯತೆಯಿಂದ ವರ್ತಿಸಿ ಶಾಂತಿ ಶಿಸ್ತನ್ನು ಕಾಪಾಡಬೇಕೆಂದು ಮನವಿ ಮಾಡಿದರು.
ಸಭೆಯಲ್ಲಿ ಉಪ ಕಾರ್ಯದರ್ಶಿ ಶ್ರೀಮತಿ ನಾಗರತ್ನ ಚೋಳಿನ್ ಡಿವ್ಯೆಎಸ್ಪಿ ಚಿದಂಬರಂ ಸಿಪಿಐ ಸುರೇಶ್ ಬಂಡೆಗುಂಬಲ ಸೇರಿದಂತೆ ಇತರೆ ಅಧಿಕಾರಿಗಳು ಸಿಬ್ಬಂದಿ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ