Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಗರದಲ್ಲಿ ಯಡಿಯೂರಪ್ಪ ಅಭಿಮಾನೋತ್ಸವ ಸಿದ್ದತಾ ಸಭೆ

ಬಳ್ಳಾರಿ, ಮೇ.15: ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ಈ ತಿಂಗಳ 9 ರಂದು ಚಿತ್ರದುರ್ಗದಲ್ಲಿ ನಡೆಯುವ ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಜೀವನದ ಅಭಿಮಾನೋತ್ಸವ ಪೂರ್ವ ಸಿದ್ದತಾ ಸಭೆ ನಡೆಯಿತು.
ನಗರದ ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ, ಮಾಜಿ ಸಂಸದ ಸಣ್ಣ ಪಕ್ಕೀರಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ಅನಿಲ್ ನಾಯ್ಡು, ಮಾಜಿ ಅಧ್ಯಕ್ಷ ಗುತ್ತಿಗನೂರು ವಿರೂಪಾಕ್ಷಗೌಡ, ಬಿಚ್ಚುಗಲ್ಲು ಪಂಚಾಕ್ಷರಪ್ಪ ಮೊದಲಾದವರು ಅಭಿಮಾನೋತ್ಸವಕ್ಕೆ ಜಿಲ್ಲೆಯಿಂದ ಯಡಿಯೂರಪ್ಪ ಅವರ ಅಭಿಮಾನಿಗಳನ್ನು ಕರೆದುಕೊಂಡು ಹೋಗುವ ಕುರಿತು ಚರ್ಚೆ ನಡೆಸಿದರು.
ಈ ವೇಳೆ ಜಿಲ್ಲೆಯಲ್ಲಿನ ಯಡಿಯೂರಪ್ಪ ಅಭಿಮಾನಿಗಳ ಮತ್ತು ವೀರಶೈವ ಲಿಂಗಾಯತ ಸಮಾಜದ ಮುಖಂಡರುಗಳ ಸಭೆಯನ್ನು ನಾಳೆ ಸಂಜೆ. 5 ಕ್ಕೆ ನಗರದ ವೀರಶೈವ ವಿದ್ಯಾವರ್ಧಕ ಸಂಘದ ಸಭಾಂಗಣದಲ್ಲಿ ನಡೆಸಲು ನಿರ್ಧರಿಸಲಾಯ್ತು.
ಸಭೆಯಲ್ಲಿ ಮುಖಂಡರುಗಳಾದ, ಎಸ್.ಮಲ್ಲನಗೌಡ, ಶ್ರಿನಿವಾಸ್ ಮೋತ್ಕರ್, ಬಣಾಪುರ ನಾಗರಾಜಗೌಡ, ಕಪ್ಪಗಲ್ಲು ಶಿವರುದ್ರಪ್ಪ, ಹೊನ್ನನಗೌಡ, ನಡವಿ ವೀರನಗೌಡ, ಹಲಕುಂದಿ ವೀರನಗೌಡ, ಜಡೇಗೌಡ ಮೊದಲಾದವರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST