Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನಾ೯ಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು, 

ಕನಾ೯ಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಮಿಂಚು, ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಸಿದೆ. ಈ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. IMD ಪ್ರಕಾರ, ಕರ್ನಾಟಕದ ಉತ್ತರ ಒಳನಾಡು ಭಾಗದಲ್ಲಿ 17ರವರೆಗೆ ಗಂಟೆಗೆ 40-50 ಕಿಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಮಿಂಚು ಹಾಗೂ ಬಿರುಗಾಳಿಯಿಂದ ಕೆಲ ಪ್ರದೇಶಗಳಲ್ಲಿ ಅಪಾಯದ ಪರಿಸ್ಥಿತಿ ಉಂಟಾಗಬಹುದು ಎಂದು ಎಚ್ಚರಿಸಲಾಗಿದೆ.

Advertisement

ವಾಯುಭಾರ ಕುಸಿತದ ಎಫೆಕ್ಟ್​​

ಮೇ 18ರಂದು ಗಾಳಿಯ ವೇಗ ಸ್ವಲ್ಪ ಕಡಿಮೆಯಾಗಬಹುದಾದರೂ, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಗಂಟೆಗೆ 30-40 ಕಿಮೀ ವೇಗದ ಗಾಳಿಯೊಂದಿಗೆ ಗುಡುಗು ಮಳೆಯಾಗುವ ಸಾಧ್ಯತೆ ಮುಂದುವರಿಯಲಿದೆ. ಉತ್ತರ ಕರ್ನಾಟಕ ಮಾತ್ರವಲ್ಲದೆ, ದಕ್ಷಿಣ ಒಳನಾಡು ಕರ್ನಾಟಕದಲ್ಲೂ ಈ ಅವಧಿಯಲ್ಲಿ ಗಂಟೆಗೆ 40-50 ಕಿಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದ ಪ್ರಭಾವದ ಪರಿಣಾಮ ಭಾರಿ ಮಳೆಯನ್ನು ಅಂದಾಜಿಸಲಾಗಿದೆ. ರಾಜ್ಯದ ಶೇ.50ಕ್ಕಿಂತ ಹೆಚ್ಚಿನ ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚಿನ ಸಮೇತ ವರುಣ ಅಬ್ಬರಿಸಲಿದ್ದಾನೆ. ಹೀಗಾಗಿ ಮುಕ್ಕಾಲು ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್​​ ಘೋಷಿಸಲಾಗಿದೆ ಎಂದು ಹವಾಮಾನ ತಜ್ಞ ಸಿ.ಎಸ್​​. ಪಾಟೀಲ್​​ ತಿಳಿಸಿದ್ದಾರೆ.

ಎಲ್ಲೆಲ್ಲಿ ಯೆಲ್ಲೋ ಅಲರ್ಟ್​​?

ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಉಡುಪಿ ಮತ್ತು ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಸನ, ತುಮಕೂರು, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
" ದೇಶದ ಉನ್ನತ ಹುದ್ದೆಗಳನ್ನು ಏರಲು ಶಿಸ್ತುಬದ್ಧ ಅಧ್ಯಯನ ಹಾಗೂ ದೃಢ ಸಂಕಲ್ಪ ಅಗತ್ಯ" ಮೇ.೨೪ ರಂದು ಕನಕ ಶ್ರೀ ಪ್ರತಿಭಾ ಪುರಸ್ಕಾರ ಸಮಾರಂಭ ವಿಶ್ವಾಸ ಟ್ರೋಪಿ-2026ಗೆ ಅದ್ಧೂರಿ ಚಾಲನೆ : ಅಶ್ವತ್ ವೈದ್ಯರಿಂದ ಉದ್ಘಾಟನೆಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ವೇದಿಕೆ’ಯಿಂದ ಎರಡನೇ ಹಂತದ ತೀವ್ರ ಹೋರಾಟ ಆರಂಭಶಿವಾನಂದ ನೀಲಣ್ಣವರ ಈತನ ಶಿವಂ ಅಸೋಸಿಯೇಷನ ಕಛೇರಿಗಳು ಸೀಜ್. ಬಿಜೆಪಿಯಿಂದ ಎರಡು ದಿನಗಳ ಜಿಲ್ಲಾ ಮಟ್ಟದ ಪ್ರಶಿಕ್ಷಣವರ್ಗ ಆಯೋಜನೆಟ್ಯಾಂಕರ್​​ ಗುದ್ದಿದ ಪರಿಣಾಮ ಸೇತುವೆಯಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್​​ಕನಾ೯ಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ಸುಧಾರಿತ ವಸ್ತುಗಳ ಸಂಶೋಧನೆ ಮತ್ತು ಅಭಿವೃದ್ಧಿ ಪರಿಸರ ವ್ಯವಸ್ಥೆ ಅನಾವರಣಗೊಳಿಸಿದ ಏಕಸ್ ಮತ್ತು ಧಾರವಾಡ ಐಐಟಿಹುಬ್ಬಳ್ಳಿ-ಧಾರವಾಡ ಪಾಲಿಕೆ ನಿವೇಶನಗಳು ಅಕ್ರಮ ಮಾರಾಟ