LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಕರ್ನಾಟಕದಾದ್ಯಂತ ನಾಳೆಯಿಂದ ಮಳೆ ಚುರುಕು ಜಿಲ್ಲೆಗಳಿಗೆ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದಾದ್ಯಂತ ಮಳೆಯು ನಾಳೆಯಿಂದ ಚುರುಕುಗೊಳ್ಳಲಿದೆ. ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಕೊಂಚ ಬಿಡುವು ಪಡೆದಿದ್ದು, ನಾಳೆಯಿಂದ ಮತ್ತೆ ಹೆಚ್ಚಳವಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಹಾಸನ, ದಾವಣಗೆರೆ, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಮಳೆಯಾಗಲಿದೆ. ಬರಗೂರು, ಜೋಯಿಡಾ, ಸಿದ್ದಾಪುರ, ಕದ್ರಾ, ಗೌರಿಬಿದನೂರು, ತೊಂಡೇಭಾವಿ, ಕಾರ್ಕಳ, ಮಂಠಾಳ, ಹಿರಿಯೂರು, ಕುಣಿಗಲ್, ಚಿಕ್ಕಬಳ್ಳಾಪುರ, ಯಲ್ಲಾಪುರ, ಕೋಟ, ಕುಂದಾಪುರ, ಸಂಕೇಶ್ವರ, ಕಲಬುರಗಿ, ಎನ್​ಆರ್​ಪುರ, ಮಿಡಿಗೇಶಿ, ಸಿರಾ, ಹೊನ್ನಾಳಿ, ತಿಪಟೂರು, ಮುಂಡಗೋಡು, ಗೇರುಸೊಪ್ಪ, ಕಾರವಾರ, ಭಾಲ್ಕಿ, ಸಿಂಧನೂರು, ಔರಾದ್, ಚನ್ನಗಿರಿ, ಬೆಳ್ಳೂರು, ಮಧುಗಿರಿ, ಚಾಮರಾಜನಗರ, ಪಾವಗಡದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ನಿತ್ಯ ಸಂಜೆ ವೇಳೆ ಮಳೆಯಾಗುತ್ತಿದೆ. ಎಚ್​ಎಎಲ್​ನಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್