LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮೊಂತಾ ಚಂಡಮಾರುತ ಆರ್ಭಟ: ರಾಜ್ಯದ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು, ಅಕ್ಟೋಬರ್​ 29: ಮೊಂತಾ ಚಂಡಮಾರುತದ ಹಿನ್ನಲೆ ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆಯಲಿದ್ದು, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಿರಲಿದೆ. ಬೆಂಗಳೂರಿನಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



ರಾಜ್ಯದಲ್ಲಿ ಮಳೆಯಾಗುವ ಸಾರ್ಧಯತೆಗಳು ಹೆಚ್ಚಿದ್ದು, ಉತ್ತರ ಕನ್ನಡ, ಗದಗ, ಧಾರವಾಡ, ಹಾವೇರಿ, ಬೆಳಗಾವಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ 30-40 ಕೀಮೀ ನಿರಂತರ ಗಾಳಿಯೊಂದಿಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೀದರ್, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರನ ಮಳೆಯಾಗಲಿದ್ದು, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್