ಬಳ್ಳಾರಿ, ಜೂನ್ 21: 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಗರದ ಎಸ್.ಎನ್. ಪೇಟೆಯ ಶಾರದಾ ವಿದ್ಯಾಪೀಠ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ಯೋಗ ಕಾರ್ಯಕ್ರಮ ನಡೆಯಿತು.
ಕಾರ್ಪೊರೇಟರ್ ಅಶೋಕ್ ಕಾರ್ಯಕ್ರಮ ಉದ್ಘಾಟಿಸಿದರು. ಚಿದಂಬರ ರಾವ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಶೋಕ್ ದಿನ್ನಿ, ವಿಜಯ ಕರ್ನಾಟಕದ ಮೂರ್ತಿ, ಯೋಗ ಶಿಕ್ಷಕಿ ರಾಜ್ಯಶ್ರೀ ಹಾಗೂ ಶಾಲೆಯ ಪ್ರಾಂಶುಪಾಲರು ಉಪಸ್ಥಿತರಿದ್ದರು.
ಪತಂಜಲಿ ಯೋಗ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು 45 ನಿಮಿಷಗಳ ಕಾಲ ಯೋಗಾಸನ ಮತ್ತು ಪ್ರಾಣಾಯಾಮ ಅಭ್ಯಾಸ ನಡೆಸಿದರು. ಯೋಗದ ಮಹತ್ವ ಕುರಿತು ಗಣ್ಯರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಂತ್ಯದಲ್ಲಿ ಗಣ್ಯರನ್ನು ಸನ್ಮಾನಿಸಿ, ವಿದ್ಯಾರ್ಥಿಗಳಿಗೆ ಬಿಸ್ಕೆಟ್ ಮತ್ತು ಬಾಳೆಹಣ್ಣು ವಿತರಿಸಲಾಯಿತು. ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರು ಉತ್ಸಾಹದಿಂದ ಭಾಗವಹಿಸಿದರು.