Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುವಕರು ಸನ್ಮಾರ್ಗದಲ್ಲಿ ಮುನ್ನಡೆಯಲು ಸನ್ನದ್ಧಗೊಳಿಸಬೇಕು: ಅಡ್ನೂರ ಶ್ರೀಗಳ ಅಭಿಮತ

ಗದಗ, ಜು. ೪ : ಯುವಕರನ್ನು ಆಧ್ಯಾತ್ಮಿಕ ಹಾಗೂ ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸುವ ಮೂಲಕ ಅವರನ್ನು ಧರ್ಮದ ಸನ್ಮಾರ್ಗದಲ್ಲಿ ಮುನ್ನಡೆಯುವಂತೆ ಸನ್ನದ್ಧಗೊಳಿಸುವದು ಎಂದಿಗಿಂತ ಇಂದು ಅವಶ್ಯವಿದೆ ಎಂದು ಅಡ್ನೂರ ರಾಜೂರ ಗದಗ ಬೃಹನ್ಮಠದ ಪೂಜ್ಯ ಅಭಿನವ ಪಂಚಾಕ್ಷರ ಶಿವಾಚಾರ್ಯ ಸ್ವಾಮಿಗಳು ಹೇಳಿದರು.


ಅವರು ಗುರುವಾರ ನಗರದ ಗಾಣಿಗ ಭವನದಲ್ಲಿ ಗದಗ-ಬೆಟಗೇರಿ ಶ್ರೀ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಪ್ರವಚನ ಸಮಿತಿ ಶ್ರೀಮದ್ ಕಾಶೀ ನೂತನ ಜಗದ್ಗುರುಗಳವರ ಆಷಾಡ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಶ್ರೀ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದರು.


ಇಂದಿಲ್ಲಿ ಪ್ರವಚನಕ್ಕೆ ಬಂದವರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಯೋಮಾನ ಹಾಗೂ ಮಧ್ಯ ವಯಸ್ಕರರು ಇವರೊಂದಿಗೆ ಯುವಕರೂ ಇಂತಹ ಇಷ್ಟಲಿಂಗ ಮಹಾಪೂಜೆ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಬೇಕು ಅಂದಾಗ ಅವರಲ್ಲಿ ಧರ್ಮ ಸಂಸ್ಕಾರ, ಆಧ್ಯಾತ್ಮಿಕ ಸಂಸ್ಕೃತಿ ತಿಳಿಯುವದು ಆ ಮೂಲಕ ಅವರಲ್ಲಿ ಸದ್ಗುಣಗಳು ಬಂದು ಅವರು ಜೀವನಲ್ಲಿ ಸತ್ಪ್ರಜೆಗಳಾಗಿ ಬಾಳಲು ಪೂರಕವಾಗುವದು ಎಂದರು.

ನರೇಗಲ್ ಹಿರೇಮಠದ ಪೂಜ್ಯ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು ಶ್ರೀ ಸಿದ್ದಾಂತ ಸಿಖಾಮಣಿ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ ಭಯ ದುರ್ಗುಣಗಳ ಸೇನಾಧಿಪತಿಯಾಗಿದ್ದು ಸತ್ಯ ಮತ್ತು ಪ್ರಾಮಾಣಿಕತೆಯಿಂದ ಜೀವನ ಮಾಡುವವರು ಯಾವುದಕ್ಕೂ ಭಯಪಡುವ ಅಗತ್ಯವಿಲ್ಲ. ಸತ್ಯ ಪರಿಪಾಲನೆ ಅಗತ್ಯವಿದೆ. ಸತ್ಯದಿಂದ ನಡೆಯುವದೂ ಸಹ ಒಂದು ತಪಸ್ಸು ಇದ್ದಂತೆ ಎಂದರು.

ಸಾನಿಧ್ಯ ವಹಿಸಿ ಮಾತನಾಡಿದ ಜಂಗಮವಾಡಿಮಠ ವಾರಣಾಸಿ ಕಾಶೀ ಮಹಾಪೀಠದ ಜ.ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಭಗವತ್ಪಾದಂಗಳವರು ಸತ್ಯ, ನಿಷ್ಠೆ, ಪ್ರಾಮಾಣಿಕತೆಯುಳ್ಳವರು ಜೀವನದಲ್ಲಿ ಯಶಸ್ಸನ್ನು ಸಾಧಿಸಬಲ್ಲರು ಇವರಿಗೆ ಸಮಾಜದಲ್ಲಿ ಗೌರವ ಇದೆ ಎಂದರು.


ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಜ್ಞಾನಾರ್ಜನೆಗೆ ಹಾಗೂ ಸತ್ಕಾರ್ಯಗಳಿಗೆ ಸದುಪಯೋಗ ಮಾಡಿಕೊಳ್ಳಬೇಕು. ಇಂದು ಮೊಬೈಲ್ ಬಂದು ಸುಳ್ಳು ಹೇಳುವದನ್ನು ಇನ್ನಷ್ಟು ಸುಗಮಗೊಳಿಸಿದೆ, ಆದರೆ ಸುಳ್ಳು ಸದಾವಕಾಲ ಫಲಿಸದು ಅದರಿಂದ ಹಾನಿಯೇ ಹೆಚ್ಚು ಆದ್ದರಿಂದ ಮನೆಯಲ್ಲಿ ಹಿರಿಯರು ಸತ್ಯವನ್ನು ಮಾತನಾಡುವ ಮೂಲಕ ಮಕ್ಕಳಿಗೂ ಅಂತಹ ಸಂಸ್ಕಾರವನ್ನು ರೂಢೀಸಬೇಕು ಎಂದರು.

ಭಕ್ತಿ ಸೇವೆ ವಹಿಸಿಕೊಂಡಿದ್ದ ಪ್ರಭುಸ್ವಾಮಿ ದಂಡಾವತಿಮಠ, ಸಿದ್ಧರಾಮೇಶ್ವರ ಬಾರಕೇರ, ಕೆ.ಎಸ್.ಕೋರಿಮಠ, ಶರಣಪ್ಪ ಕುರಡಗಿ, ಮಲ್ಲಿಕಾರ್ಜುನ ಸುರಕೋಡ, ಶಿವಯೋಗಿ ತೆಗ್ಗಿನಮಠ, ಪ್ರಶಾಂತ ತಂಬ್ರಳ್ಳಿಮಠ, ಚನ್ನಬಸವರಾಜ ಹಿರೇಮಠ, ಪ್ರವೀಣ ಚನ್ನಳ್ಳಿಮಠ, ಫಕ್ಕೀರಯ್ಯಶಾಸ್ತ್ರಿ ಹಿರೇಮಠ, ರೋಹಿತ ಅಬ್ಬಿಗೇರಿ, ಆಂಜನೇಯ ಕಟಗಿ ರಾಜಶೇಖರ ಮುಧೋಳ ದಂಪತಿಗಳಿಗೆ ಪೂಜ್ಯರು ಸನ್ಮಾನಿಸಿ ಗೌರವಿಸಿದರು.

ಮಂಗಳಾ ಯಾನಮಶೆಟ್ಟಿ ಪ್ರಾರ್ಥಿಸಿದರು ಗದಗ ಜಿಲ್ಲಾ ವೀರಶೈವ ಮಹಾಸಭಾದ ಅಧ್ಯಕ್ಷ ಶರಣಬಸಪ್ಪ ಗುಡಿಮನಿ ಸ್ವಾಗತಿಸಿದರು ಸಮಿತಿಯ ಕಾರ್ಯಾಧ್ಯಕ್ಷ ವ್ಹಿ.ಕೆ.ಗುರುಮಠ ನಿರೂಪಿಸಿ ವಂದಿಸಿದರು.

= = =

ಫೋಟೋ ಇದೆ : ಅಡ್ನೂರ ಶ್ರೀ

= = =

ಸುದ್ದಿ ಪ್ರಕಟಣೆ ಕೃಪೆಗೆ/ ವ್ಹಿ.ಕೆ.ಗುರುಮಠ.

= = =
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ