Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುವಜನತೆ ಸಶಕ್ತಗೊಳಿಸಲು ಯುವನಿಧಿ ಪ್ಲಸ್ ಯೋಜನೆ ಜಾರಿ: ಕುರಿ ಶಿವಮೂರ್ತಿ

ವಿಜಯನಗರ(ಹೊಸಪೇಟೆ),  : ಯುವಜನತೆಯನ್ನು ಪ್ರೋತ್ಸಾಹಿಸಲು ಯುವನಿಧಿ ಯೋಜನೆಯ ಮೂಲಕ ವಿವಿಧ ಕೌಶಲ್ಯಾಧರಿತ ತರಬೇತಿಗಳನ್ನು ನೀಡುವ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ರಾಜ್ಯ ಸರ್ಕಾರ ಯುವನಿಧಿ ಪ್ಲಸ್ ಯೋಜನೆ ಜಾರಿ ಮಾಡಿದ್ದು, ಯುವಕ, ಯುವತಿಯರು ಸದುಪಯೋಗಪಡಿಸಿಕೊಳ್ಳಬೇಕಿದೆ ಎಂದು ಗ್ಯಾರಂಟಿ ಯೋಜನೆ ಅನುಷ್ಟಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕುರಿ ಶಿವಮೂರ್ತಿ ಹೇಳಿದರು.

ನಗರದ ಟಿಎಂಎಇಎಸ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ಯುವನಿಧಿ ಮತ್ತು ಯುವನಿಧಿ ಪ್ಲಸ್ ಯೋಜನೆ ಕುರಿತು ಅರಿವು ಮೂಡಿಸುವ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಗುರುವಾರ ಅವರು ಮಾತನಾಡಿದರು, ಯುವನಿಧಿ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳು ನೊಂದಾಣಿ ಮಾಡಿಕೊಂಡು ಕೇವಲ ಧನಸಹಾಯ ಪಡೆಯುವುದಷ್ಟೇ ಅಲ್ಲದೇ ನಿರುದ್ಯೋಗ ಸಮಸ್ಯೆಯನ್ನು ತೊಲಗಿಸಿ ಸ್ವಂತ ಉದ್ಯೋಗ ಸೃಷ್ಟಿ ಮಾಡಿಕೊಳ್ಳುವಷ್ಟು ಸಬಲರನ್ನಾಗಿಸಲು ರಾಜ್ಯ ಸರ್ಕಾರ ಹೊಸ ಅಲೋಚನೆಗಳೊಂದಿಗೆ ಯುವನಿಧಿ ಪ್ಲಸ್ ಆರಂಭಿಸಲಾಗಿದೆ. ಈಗಾಗಲೇ ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 8007 ಫಲಾನುಭವಿಗಳು ನೊಂದಾಣಿಯಾಗಿದ್ದಾರೆ. ಪ್ರಸ್ತುತ 109 ಅಭ್ಯರ್ಥಿಗಳು ಸರ್ಕಾರಿ ಸಂಸ್ಕಥೆಗಳಿAದ ಕೌಶಲ್ಯ ತರಬೇತಿಯನ್ನು ನೀಡಲಾಗುತ್ತಿದೆ. ಹಂತ ಹಂತವಾಗಿ ಎಲ್ಲಾ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿಗಳನ್ನು ನೀಡಲಾಗುವುದು. ರಾಜ್ಯ ಸರ್ಕಾರದ ಅಧೀನದಲ್ಲಿರುವ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಸರ್ಕಾರಿ ಪರಿಕರ ಕೊಠಡಿ ಮತ್ತು ತರಬೇತಿ ಕೇಂದ್ರ(ಜಿಜಿಟಿಸಿ), ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ(ಕೆಜಿಟಿಟಿಐ) ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ವೃತ್ತಿಪರ ತರಬೇತಿ ಪೂರೈಕೆದಾರರು ಸೇರಿದಂತೆ ಸರ್ಕಾರಿ ತರಬೇತಿ ಸಂಸ್ಥೆಗಳಲ್ಲಿ ಈ ಯೋಜನೆಯನ್ನು ಬಳಸಿಕೊಳ್ಳಲಾಗುತ್ತದೆ ಎಂದರು.

ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಪಿ.ಎಸ್.ಹಟ್ಟಪ್ಪ ಮಾತನಾಡಿ, ಯುವನಿಧಿ ಫಲಾನುಭವಿಗಳು ಕಡ್ಡಾಯವಾಗಿ ಉಚಿತ ಕೌಶಲ್ಯ ತರಬೇತಿಯನ್ನು ಪಡೆಯಲು ಹೆಚ್ಚು ಆಸಕ್ತಿ ವಹಿಸಬೇಕಿದೆ. ಮುಂದಿನ ದಿನಗಳಲ್ಲಿ ಯುವಜನತೆಗೆ ಆಸಕ್ತಿದಾಯಕ ತರಬೇತಿಗಳನ್ನು ನೀಡಲು. ರಾಜ್ಯ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ವಹಿಸಲಾಗಿದೆ. ಸದ್ಯಕ್ಕೆ ಸರ್ಕಾರದ ಅಧೀನದಲ್ಲಿರುವ ಸಂಸ್ಥೆಗಳಿAದ ತರಬೇತಿ ನೀಡಲು ಮುಂದಾಗಿದೆ. ನಿರೀಕ್ಷೆಗೆ ಮೀರಿ ಯುವಕರಿಂದ ನೋಂದಾಣಿಗಳಾದಲ್ಲಿ ತರಬೇತಿ ಕೇಂದ್ರಗಳು ಮತ್ತು ಸಂಸ್ಥೆಗಳನ್ನು ವಿಸ್ತರಿಸಲಾಗುವುದು. ನಿರುದ್ಯೋಗ ವಿದ್ಯಾವಂತ ಯುವಕ ಮತ್ತು ಯುವತಿಯರಿಗೆ ಕೌಶಲ್ಯಾಧರಿತ ತರಬೇತಿಗಳ ಅಗತ್ಯವಿದೆ. ಜತೆಗೆ ಯುವನಿಧಿ ಫಲಾನುಭವಿಗಳು ಸಹ ಕಡ್ಡಾಯವಾಗಿ ಸರ್ಕಾರದ ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮದ ವೆಬ್‌ಸೈಟ್ https://www.kaushalkar.com/app/registration_verify ಮೂಲಕ ನೊಂದಾಯಿಸಿಕೊಳ್ಳಬೇಕಿದೆ ಎಂದರು.

ಈ ವೇಳೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಹೆಚ್.ಜಂದಿಸಾಹೇಬ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯ ಪಿ.ಹೆಚ್.ದೇವರಾಜ್, ಟಿಎಂಎಇಎಸ್ ಪಾಲಿಟೆಕ್ನಿಕ್ ಡಿಪ್ಲೋಮ್ ಕಾಲೇಜಿನ ಪ್ರಾಚಾರ್ಯರರು ಹೆಚ್.ಶಂಕರಾನAದ, ಉಪಪ್ರಾಚಾರ್ಯ ಟಿ.ನಜರುದ್ಧೀನ್, ಟಿಎಂಎಇಎಸ್ ಪಾಲಿಟೆಕ್ನಿಕ್ ಐಟಿಐ ಕಾಲೇಜಿನ ಪ್ರಾಚಾರ್ಯರಾದ ರೇವಣಸಿದ್ದಪ್ಪ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ