ಮುದ್ದೇಬಿಹಾಳ,21 : ಪ್ರತಿ ವರ್ಷ ಭಾರತದಲ್ಲಿ ಸುಮಾರು ಹತ್ತರಿಂದ ಹನ್ನೆರಡು ಮಿಲಿಯನ್ ಯುವಕ ಯುವತಿಯರು ಹದಿನೆಂಟು ವರ್ಷಕ್ಕೆ ಕಾಲಿಡುತ್ತಾರೆ. ಇವರೆಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡಾಗ ಭಾರತದ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವ ಯುವ ರತ್ನಗಳಾಗುತ್ತಾರೆ ಎಂದು ಪ್ರೊ. ರವಿ ಕಟ್ಟಿಮನಿ ಹೇಳಿದರು.
ಮುದ್ದೇಬಿಹಾಳ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಮಾದರಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜು ಹಡಲಗೇರಿ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಯುವ ಮತದಾರರ ನೋಂದಣಿ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಗತ್ತಿನಲ್ಲಿ ಭಾರತ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ ಬಲಪಡಿಸಬೇಕು ಎಂದು ಪ್ರಾಚಾರ್ಯರು ಎಸ್. ಎಸ್ ಅಂಗಡಿ ಹೇಳಿದರು.
ಕಾರ್ಯಕ್ರಮದಲ್ಲಿ ಇ.ಎಲ್.ಸಿ ಸಂಚಾಲಕರಾದ ಎಸ್. ಜಿ. ಲೇಟಗೇರಿ ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.