Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧಾರವಾಡ ದಲ್ಲಿ ಯುವ ಕಾಂಗ್ರೆಸ್ ಮುಂಖಡನ ಕೊಲೆ

 

ಧಾರವಾಡ, 11 :ವಿದ್ಯಾಕಾಶಿ ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಭೀಕರ ರಕ್ತಪಾತ ನಡೆದಿದ್ದು, ಸಕ್ರಿಯ ರಾಜಕಾರಣದಲ್ಲಿ ಗುರುತಿಸಿಕೊಂಡಿದ್ದ ಯುವ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಅತಿ ಅಮಾನುಷವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ಜಿಲ್ಲೆಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದು, ಸಾರ್ವಜನಿಕ ವಲಯದಲ್ಲಿ ಭೀತಿ ಆವರಿಸಿದೆ.

​ಪ್ರಾಥಮಿಕ ಮಾಹಿತಿಯ ಪ್ರಕಾರ, ಘಟನೆಯು ಫೈರೋಜ್ ಪಠಾಣ್ ಅವರ ನಿವಾಸದಲ್ಲೇ ನಡೆದಿದೆ. ರಾತ್ರಿ ಮನೆಗೆ ನುಗ್ಗಿದ ಅಪರಿಚಿತ ದುಷ್ಕರ್ಮಿಗಳ ತಂಡವೊಂದು ಫೈರೋಜ್ ಅವರ ಮೇಲೆ ಏಕಾಏಕಿ ಚಾಕು ಹಾಗೂ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ. ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ತಕ್ಷಣವೇ ಧಾರವಾಡದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ.

​ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಜಿಲ್ಲಾ ಆಸ್ಪತ್ರೆಯ ಮುಂಭಾಗದಲ್ಲಿ ಮೃತರ ಬೆಂಬಲಿಗರು ಹಾಗೂ ಸಾರ್ವಜನಿಕರು ದೊಡ್ಡ ಮಟ್ಟದಲ್ಲಿ ಜಮಾಯಿಸಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ವಿದ್ಯಾಗಿರಿ, ಉಪನಗರ ಹಾಗೂ ಶಹರ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ರಾಜಕೀಯವಾಗಿ ಸಕ್ರಿಯರಾಗಿದ್ದ ಫೈರೋಜ್ ಅವರ ಹತ್ಯೆಗೆ ಹಳೆ ಹಗೆತನ ಕಾರಣವೇ ಅಥವಾ ರಾಜಕೀಯ ದ್ವೇಷವೇ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಸದ್ಯಕ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ