10 ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ

Ravi Talawar
10 ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ
WhatsApp Group Join Now
Telegram Group Join Now

 ಇಂದು ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ದಾಖಲೆಯ 10 ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ   ಸ್ವೀಕರಿಸಿದರುಅವರೊಂದಿಗೆ ಒಟ್ಟು 19 ಇತರ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.

ನಿತೀಶ್​​ ಕುಮಾರ್ ಜೊತೆಗೆಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಅವರು ರಾಜ್ಯದ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.ಪಾಟ್ನಾದ ಗಾಂಧಿ ಮೈದಾನದಲ್ಲಿ ದಾಖಲೆಯ 10 ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ನಿತೀಶ್​​ ಕುಮಾರ್​ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಎನ್‌ಡಿಎಯ ಹಲವಾರು ಉನ್ನತ ನಾಯಕರು ಭಾಗವಹಿಸಿದ್ದರು.

ಎನ್‌ಡಿಎ ಆಡಳಿತವಿರುವ ಇತರ ಹಲವಾರು ರಾಜ್ಯಗಳ ಮುಖ್ಯಮಂತ್ರಿಗಳು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬುಧವಾರ ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ಮುಂದೆ ಹೊಸ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದರು. ಪ್ರಮುಖ ಎನ್‌ಡಿಎ ಘಟಕಗಳಾದ ಬಿಜೆಪಿ ಮತ್ತು ಜೆಡಿ(ಯು)ಗಳಿಗೆ ಸಚಿವ ಸ್ಥಾನಗಳ ಹೊರತಾಗಿಮೈತ್ರಿಕೂಟದ ಇತರ ಪಾಲುದಾರ ಪಕ್ಷಗಳು ಸಮತೋಲಿತ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಲು ಪ್ರತಿ ಆರು ಶಾಸಕರಿಗೆ ಒಂದು ಸಚಿವ ಸ್ಥಾನವನ್ನು ಪಡೆಯುವ ಸಾಧ್ಯತೆಯಿದೆ.

 

WhatsApp Group Join Now
Telegram Group Join Now
Share This Article