ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿಲ್ಲ, ತನಿಖೆಗೆ ಸೂಚಿಸಿದ್ದೇನೆ; ರಾಜ್ಯಪಾಲರ ಅಚ್ಚರಿಯ ಹೇಳಿಕೆ

Ravi Talawar
ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿಲ್ಲ, ತನಿಖೆಗೆ ಸೂಚಿಸಿದ್ದೇನೆ; ರಾಜ್ಯಪಾಲರ ಅಚ್ಚರಿಯ ಹೇಳಿಕೆ
WhatsApp Group Join Now
Telegram Group Join Now

ಬೆಂಗಳೂರು, ಆಗಸ್ಟ್​ 31: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರತಿಭಟಿಸಿ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ‘ರಾಜಭವನ ಚಲೋ’ ಹಮ್ಮಿಕೊಂಡಿದ್ದು, ಹಿಂದಿನ ಪ್ರಕರಣಗಳ ವಿರುದ್ಧವೂ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವಂತೆ ಆಗ್ರಹಿಸಿದ್ದಾರೆ. ಜತೆಗೆ, ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ, ಮುರುಗೇಶ್ ನಿರಾಣಿ, ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವಂತೆ ಮನವಿ ಸಲ್ಲಿಕೆ ಮಾಡಿದ್ದಾರೆ. ಆದರೆ, ಈ ವೇಳೆ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಸಂಬಂಧ ರಾಜ್ಯಪಾಲರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ, ಜನಾರ್ದನ ರೆಡ್ಡಿ, ನಿರಾಣಿ, ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವಂತೆ ಮನವಿ ಸಲ್ಲಿಕೆ ಮಾಡಿದ್ದೇವೆ. ರಾಜ್ಯಪಾಲರು ನ್ಯಾಯ ದೊರಕಿಸಿ ಕೊಡುವ ಭರವಸೆ ನೀಡಿದ್ದಾರೆ. ರಾಜ್ಯಪಾಲರ ಕಚೇರಿ ರಾಜಕೀಯ ಪಕ್ಷದ ಕಚೇರಿ ಆಗಬಾರದು. ಇಲ್ಲಿ ಯಾರೂ ಕೂಡ ಶಾಶ್ವತ ಅಲ್ಲ ಎಂದರು.

ರಾಜ್ಯಪಾಲರ ಪೀಠ ಪವಿತ್ರವಾದದ್ದು. ಅದು ಸಂವಿಧಾನ ರಕ್ಷಿಸುವ ಪೀಠ. ರಾಜ್ಯಪಾಲರ ಕಚೇರಿ ಸರ್ಕಾರವನ್ನು ರಕ್ಷಿಸುವ ಪೀಠವಾಗಿದೆ. ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸ ನಡೆಯುತ್ತಿದೆ. ಈ ಕಚೇರಿಯಿಂದ ಸರ್ಕಾರ ಅಸ್ಥಿರಗೊಳಿಸುವ ಕೆಲಸ ಆಗಬಾರದು. ಹೀಗಾಗಿ ನಾಲ್ವರ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದೇವೆ. ನಮ್ಮ ಸಚಿವ ಸಂಪುಟದ ವಿಚಾರದ ಬಗ್ಗೆಯೂ ಮನವರಿಕೆ ಮಾಡಿದ್ದೇವೆ. ಎಲ್ಲಾ ವಿಚಾರಗಳಲ್ಲೂ ಪಕ್ಷಾತೀತವಾಗಿ ನಡೆದುಕೊಳ್ಳುವಂತೆ ಮನವಿ ಮಾಡಿದ್ದೇವೆ ಎಂದರು.

WhatsApp Group Join Now
Telegram Group Join Now
Share This Article