ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯರಾಗಿ ಗೀತಾ ಮಲ್ಲಿಕಾರ್ಜುನ ಥಾಂವಶಿ ನಾಮನಿರ್ದೇಶನ

MK HasiruKranti
ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯರಾಗಿ ಗೀತಾ ಮಲ್ಲಿಕಾರ್ಜುನ ಥಾಂವಶಿ ನಾಮನಿರ್ದೇಶನ
WhatsApp Group Join Now
Telegram Group Join Now
ಧಾರವಾಡ  ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗಕ್ಕೆ ಹೆಚ್ಚುವರಿ ಸದಸ್ಯರಾಗಿ ಧಾರವಾಡದ ಗೀತಾ ಮಲ್ಲಿಕಾರ್ಜುನ ಥಾಂವಶಿ ಅವರನ್ನು ನಾಮನಿರ್ದೇಶನ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಧಾರವಾಡದ ಜಯನಗರ ನಿವಾಸಿಯಾಗಿರುವ ಗೀತಾ ಮಲ್ಲಿಕಾರ್ಜುನ ಥಾಂವಶಿ ಅವರು ವೃತ್ತಿಯಿಂದ ವಕೀಲರಾಗಿದ್ದಾರೆ. ಇವರನ್ನು ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ, ಇವುಗಳಲ್ಲಿ ಯಾವುದಾದರೂ ಮೊದಲನೆಯದಾಗುವವರೆಗೆ ಸದಸ್ಯರಾಗಿ ನೇಮಕ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article