ಬಳ್ಳಾರಿ,೦7:ಎರಡನೇ ಪ್ರಾಶಸ್ತ್ಯ ಮತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ ಅವರು 4,651 ಮತಗಳ ಅಂತರದಿಂದ ಗೆಲುವು.
ಎರಡನೇ ಪ್ರಾಶಸ್ತ್ಯ ಮತ ಎಣಿಕೆ ನಂತರ ಒಟ್ಟಾರೆ ಕಾಂಗ್ರೆಸ್ ಅಭ್ಯರ್ಥಿ ಡಾ.ಚಂದ್ರಶೇಖರ ಪಾಟೀಲ 43,484 ಮತ, ಸಮೀಪದ ಪ್ರತಿಸ್ಪರ್ಧಿ ಬಿ.ಜೆ.ಪಿ. ಅಭ್ಯರ್ಥಿ ಅಮರನಾಥ ಪಾಟೀಲ ಅವರು 38,833 ಮತಗಳು ಪಡೆದರು.
ಒಟ್ಟಾರೆ ಚಲಾವಣೆಯಾದ 1,09,031 ಮತಗಳ ಪೈಕಿ 96,519 ಮತಗಳು ಪುರಸ್ಕೃತವಾದರೆ, 12,513 ತಿರಸ್ಕೃತವಾಗಿದ್ದವು ಚುನಾವಣಾಧಿಕಾರಿ ಕೃಷ್ಣ ಭಾಜಪೇಯಿ ಅವರು ಡಾ.ಚಂದ್ರಶೇಖರ ಪಾಟೀಲ ಅವರಿಗೆ ಗೆಲುವಿನ ಪ್ರಮಾಣ ಪತ್ರ ವಿತರಿಸಿದರು.