ಬಳ್ಳಾರಿ ಆ 25. ಬಳ್ಳಾರಿ ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಸ್ಥೆಯ ಸಭಾಂಗಣದಲ್ಲಿ ಆಗಸ್ಟ್ 25, ಸೋಮವಾರ ಬೆಳಿಗ್ಗೆ 10.30ಕ್ಕೆ “ಬಳ್ಳಾರಿ ಎನ್ಟಿಸಿ ಯಶಸ್ಸು ಸಂಭ್ರಮ ಹಾಗೂ SME BRE ಸಾಲ ಉತ್ಪನ್ನದ ನೇರ ಪ್ರದರ್ಶನ” ಕಾರ್ಯಕ್ರಮವು ಬಿ.ಡಿ.ಸಿ.ಸಿ.ಐ ಸಂಸ್ಥೆಯ ಸಭಾಂಗಣದಲ್ಲಿ ಅದ್ಧೂರಿಯಾಗಿ ನಡೆಯಿತು.
ಈ ಕಾರ್ಯಕ್ರಮವನ್ನು ಬಳ್ಳಾರಿ ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಸ್ಥೆ, ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಟ್ಯಾಕ್ಸ್ ಪ್ರ್ಯಾಕ್ಟಿಷನರ್ಸ್ ಇಂಡಿಯಾ, ಬಳ್ಳಾರಿ ತೆರಿಗೆ ಸಲಹೆಗಾರರ ಸಂಘ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ಅಧ್ಯಕ್ಷ ಶ್ರೀ ಯಶವಂತ ರಾಜ್ ನಾಗಿರೆಡ್ಡಿ, ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತೆ, ಶ್ರೀಮತಿ ಸೋನಲ್ ಜಿ. ನಾಯಕ್, ಉಪ ಆಯುಕ್ತರು ಶ್ರೀ ಇನಾಮ್ದಾರ್ ಎ., ಅವರ ಸಾನ್ನಿಧ್ಯದಲ್ಲಿ ನೆರವೇರಿಸಲಾಯಿತು.
ಸಮಾರಂಭದಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಯಶವಂತ ರಾಜ್ ನಾಗಿರೆಡ್ಡಿ ಅವರು ಸಣ್ಣ ಮತ್ತು ಮಧ್ಯಮ ಉದ್ಯಮಗಳ (SME) ಬಿಸಿನೆಸ್ ರೂಲ್ ಎಂಜಿನ್ ಲೋನ್ ಉತ್ಪನ್ನ ಕಾರ್ಯಕ್ರಮದ ಮುಖ್ಯ ಉದ್ದೇಶವು ಹೊಸ ಉದ್ಯಮ ಆರಂಭಿಸಲು ಬಯಸುವ ಉದ್ಯಮಿಗಳಿಗೆ ಅಗತ್ಯವಾದ ಆರ್ಥಿಕ ನೆರವು ಹಾಗೂ ವಿವಿಧ ರೀತಿಯ ಉತ್ಪನ್ನಗಳನ್ನು ಒದಗಿಸುವುದಾಗಿದೆ.
ಇಂತಹ ಯೋಜನೆಗಳನ್ನು ಜಾರಿಗೊಳಿಸುವುದರಿಂದ ನೂತನ ಉದ್ಯಮಿಗಳಿಗೆ ಧೈರ್ಯ, ಆತ್ಮವಿಶ್ವಾಸ ಮತ್ತು ನವಚೈತನ್ಯ ದೊರೆತು, ತಮ್ಮ ಉದ್ಯಮವನ್ನು ಯಶಸ್ವಿಯಾಗಿ ಸ್ಥಾಪಿಸಿ ವಿಸ್ತರಿಸಲು ಹೆಚ್ಚಿನ ಅವಕಾಶಗಳು ಲಭಿಸುತ್ತವೆ. ಅಂತೆಯೇ, SME ಬಿಸಿನೆಸ್ ರೂಲ್ ಎಂಜಿನ್ ಲೋನ್ ಉತ್ಪನ್ನ ಕಾರ್ಯಕ್ರಮವು ನವ ಉದ್ಯಮಿಗಳಿಗೆ ದೃಢವಾದ ಬೆಂಬಲ ವ್ಯವಸ್ಥೆಯಾಗಿ, ಅವರ ಕನಸುಗಳನ್ನು ನೈಜಗೊಳಿಸುವ ದಾರಿಯಲ್ಲೊಂದು ಮಹತ್ವದ ಹೆಜ್ಜೆಯಾಗುತ್ತದೆ ಎಂದು ತಿಳಿಸಿದರು.
ಬಿಡಿಸಿಸಿಐ ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶ್ ಬಾಬು ಅವರು ಮಾತನಾಡಿ, “ನಮ್ಮ ಸಂಸ್ಥೆಯಲ್ಲಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ನಮ್ಮ ಭಾಗ್ಯ. ಇದರಿಂದ ಎಲ್ಲಾ ಟ್ರೇಡ್ ಮತ್ತು ಇಂಡಸ್ಟ್ರಿ ಕ್ಷೇತ್ರದವರಿಗೆ ಉಪಯುಕ್ತವಾಗುತ್ತದೆ” ಎಂದು ಹೇಳಿದರು.
ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತೆ, ಶ್ರೀಮತಿ ಸೋನಲ್ ಜಿ ನಾಯಕ್ ರವರು ಮಾತನಾಡುತ್ತಾ. ಬಳ್ಳಾರಿ ಟ್ಯಾಕ್ಸ್ ಪ್ರಾಕ್ಟಿಸ್ನರ್ಗಳ ಸಂಘಟನೆಯ ಕಾರ್ಯವೈಖರಿಯನ್ನು ಶ್ಲಾಘಿಸಿದ ವಾಣಿಜ್ಯ ತೆರಿಗೆ ಇಲಾಖೆಯ ಜಾಯಿಂಟ್ ಕಮಿಷನರ್, ಶ್ರೀಮತಿ ಸೋನಾಲ ಜಿ ನಾಯಕ್, “ಸಂಘಟನೆಯಲ್ಲಿ ಬಲವಿದೆ” ಎಂಬುದನ್ನು ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಟ್ಯಾಕ್ಸ್ ಪ್ರಾಕ್ಟಿಸ್ನರ್ಗಳು ತೋರಿಸಿದ್ದಾರೆ. ಯಾವುದೇ ಸಮಸ್ಯೆ ಇದ್ದರೂ ನಮ್ಮನ್ನು ಭೇಟಿ ಮಾಡಿದರೆ, ಖಂಡಿತವಾಗಿ ಸ್ಪಂದಿಸುತ್ತೇವೆ” ಎಂದು ತಿಳಿಸಿದರು.
ಇಂತಹ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಒಳ್ಳೆಯ ವೇದಿಕೆ ಆಗಿರುತ್ತದೆ” ಎಂದು ಹೇಳಿದರು.
ಐ.ಸಿ.ಟಿ.ಪಿ.ಐ ಸಂಸ್ಥೆಯ ಅಧ್ಯಕ್ಷರಾದ ಶ್ರೀಧರ ಪಾರ್ಥಸಾರಥಿ ಅವರು ಸಂಸ್ಥೆಯು ನಡೆದು ಬಂದ ದಾರಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು, ಉದ್ಯಮಿಗಳಿಗೆ ಸಾಲ ಸೌಲಭ್ಯಗಳನ್ನು ಸುಲಭವಾಗಿ ಪಡೆಯಲು ಸಂಸ್ಥೆ ನೆರವಾಗಲಿದೆ ಎಂದು ತಿಳಿಸಿದರು. ಅವರು ಮುಂದುವರಿದು, ಉದ್ಯಮ ನಡೆಸಲು ಅಗತ್ಯವಾದ ನೂತನ ತಂತ್ರಜ್ಞಾನ, ಮಾರುಕಟ್ಟೆ ಸಂಪರ್ಕ ಮತ್ತು ಆರ್ಥಿಕ ಸಂಪನ್ಮೂಲಗಳನ್ನು ಪಡೆಯುವಲ್ಲಿ ಸಂಸ್ಥೆ ಮಾರ್ಗದರ್ಶನ ನೀಡುವುದಾಗಿ ಹೇಳಿದರು.
ಇದರಿಂದ ಹೊಸ ಉದ್ಯಮಿಗಳು ಆರ್ಥಿಕ ಅಡೆತಡೆಗಳನ್ನು ತೊಲೆದು, ತಮ್ಮ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ. ಜೊತೆಗೆ ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ಸ್ಥಾನವನ್ನು ಪಡೆಯುವಲ್ಲಿ ಸಹಾಯವಾಗುತ್ತದೆ ಎಂದು ಪಾರ್ಥಸಾರಥಿ ವಿಶ್ವಾಸ ವ್ಯಕ್ತಪಡಿಸಿದರು.
ಶಿವಕುಮಾರ್ ಅವರು ಅತಿಥಿಗಳಿಗೆ ಹೃತ್ಪೂರ್ವಕ ಸ್ವಾಗತ ಕೋರಿದರು.ಬಳ್ಳಾರಿ ಜಿಲ್ಲಾ ತೆರಿಗೆ ಸಲಹೆಗಾರರ ಸಂಘದ ಅಧ್ಯಕ್ಷರಾದ ವೆಂಕಟೇಶ ಕುಲಕುರ್ಣಿ ಅವರು ವಂದನಾರ್ಪಣೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಶಿವಕುಮಾರ್ ಜಿ.ಎಂ, ಡಾ. ದಿಲೀಪ್ ಕುಮಾರ್ ಎಚ್.ಜಿ, ಡಾ. ಕೆ.ಎಸ್. ಮಹಾಂತೇಶ್ ವಿಶೇಷ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಜೊತೆಗೆ ಹಿರಿಯ ಉಪಾಧ್ಯಕ್ಷ ಅವ್ವಾರು ಮಂಜುನಾಥ, ಸೊಂತಗಿರಿಧರ್, ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶ್ ಬಾಬು, ಜಂಟಿ ಕಾರ್ಯದರ್ಶಿಗಳು ಡಾ. ಮರ್ಚೇಡ್ ಮಲ್ಲಿಕಾರ್ಜುನಗೌಡ ಹಾಗೂ ವಿ. ರಾಮಚಂದ್ರ, ಸೇರಿದಂತೆ ಕಾರ್ಯಕಾರಿ ಸಮಿತಿ ಸದಸ್ಯರು, ವಿಶೇಷ ಆಹ್ವಾನಿತರು, ವಿಶೇಷ ಸಮನ್ವಯ ಸಮಿತಿ ಸದಸ್ಯರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.