ಬೆಂಗಳೂರು, ಮೇ 30: ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಬಾಂಗ್ಲಾದೇಶನಿವಾಸಿಗಳ ಮನೆ ಮೇಲೆ ಬುಧವಾರ ತಡರಾತ್ರಿಯಿಂದ ಗುರುವಾರ ಮುಂಜಾನೆ ವರೆಗೂ ಸಿಸಿಬಿ ಪೋಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಸಿಸಿಬಿ ಜಂಟಿ ಆಯುಕ್ತ ಚಂದ್ರಗುಪ್ತ ಮಾರ್ಗದರ್ಶನದಲ್ಲಿ ದಾಳಿ ನಡೆದಿದೆ. ಬಾಂಗ್ಲಾದೇಶದಿಂದ ನುಸುಳಿಕೊಂಡು ಅಕ್ರಮವಾಗಿ ಬೆಂಗಳೂರಿಗೆ ಬಂದಿರುವವರನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ. ಮಧ್ಯರಾತ್ರಿ 1 ಗಂಟೆಯಿಂದ ಬೆಳಗ್ಗಿನ ಜಾವ 5 ಗಂಟೆವರೆಗೂ ದಾಳಿ ನಡೆದಿದೆ.