ಯಾದಗಿರಿ, ಅಕ್ಟೋಬರ್ 22: ಸುರಪುರ ತಾಲೂಕಿನ ಬೋನಾಳ್ ಗ್ರಾಮದ ಸರ್ಕಾರಿ ಭೂಮಿಯನ್ನು ಆಂಧ್ರಪ್ರದೇಶ ರಾಜ್ಯದ ಪ್ರಭಾವಿಗಳು ಒತ್ತುವರಿ ಮಾಡಿಕೊಂಡಿದ್ದು, ತೆರವುಗೊಳಿಸುವಂತೆ ಗ್ರಾಮಸ್ಥರು ಮನವಿ ಮಾಡಿಕೊಂಡರೂ, ಅಧಿಕಾರಿಗಳು ಮಾತ್ರ ಕ್ರಮಕ್ಕೆ ಮುಂದಾಗದೆ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಗ್ರಾಮಸ್ಥರು ದಾಖಲೆಗಳನ್ನು ತೆಗೆದು ಪರಿಶೀಲನೆ ಮಾಡಿದಾಗ ಜಾಲಿ ಕಂಟಿ ಬೆಳೆದು ಪಾಳು ಬಿದ್ದಿದ್ದ ಜಮೀನು ಸರ್ಕಾರಿ ಜಮೀನು ಅಂತ ಗೊತ್ತಾಗಿದೆ. ಆದರೆ, ಆಂಧ್ರ ಮೂಲದ ಪ್ರಭಾವಿಗಳು ಸ್ಥಳೀಯ ಪ್ರಭಾವಿಗಳ ಜೊತೆ ಸೇರಿ ಸುಮಾರು 30 ಎಕರೆಗೂ ಅಧಿಕ ಸರ್ಕಾರಿ ಭೂಮಿಯನ್ನು ಲಪಾಟಿಯಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.