ಜಗದೀಶ ಶೆಟ್ಟರ್ ಪ್ರಚಾರ ಸಭೆ ನಡೆಸಿ, ಮತಯಾಚನೆ

Ravi Talawar
ಜಗದೀಶ ಶೆಟ್ಟರ್ ಪ್ರಚಾರ ಸಭೆ ನಡೆಸಿ, ಮತಯಾಚನೆ
WhatsApp Group Join Now
Telegram Group Join Now
ಬೆಳಗಾವಿ,27: ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿಯ ಭರತೇಶ ಶಿಕ್ಷಣ ಸಂಸ್ಥೆಯ ಸಿಬ್ಬಂದಿ ವರ್ಗದವರೊಂದಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಆಭ್ಯರ್ಥಿ ಜಗದೀಶ ಶೆಟ್ಟರ್ ಅವರು ಪ್ರಚಾರ ಸಭೆ ನಡೆಸಿ, ಮತಯಾಚನೆ ಮಾಡಿದರು‌.
ಶುಕ್ರವಾರ ಬೆಳಗಾವಿಯಲ್ಲಿರುವ ಭರತೇಶ ಶಿಕ್ಷಣ ಸಂಸ್ಥೆಯ ಸಿಬ್ಬಂದಿ ವರ್ಗದವರೊಂದಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರು, ಪ್ರಚಾರ ನಡೆಸಿ, ಮಾತನಾಡಿದ ಅವರು, ನರೇಂದ್ರ ಮೋದಿಯವರನ್ನು ಮೂರನೆ ಬಾರಿಗೆ ಮತ್ತೆ ಪ್ರಧಾನಿಯನ್ನಾಗಿ ಮಾಡಬೇಕು.‌ 2014 ರಲ್ಲಿ ಮೋದಿ ಅವರು ಪ್ರಧಾನಿ ಆದಾಗ ಭಾರತದ ಆಡಳಿತ ವ್ಯವಸ್ಥೆ ಭ್ರಷ್ಟಾಚಾರದಿಂದ ಕುಡಿತು ಅದರೆ ಮೊದಿಯವರು ಪ್ರಧಾನಿಯಾದ ಬಳಿಕ ಅವರು ಒಂದೆ ಒಂದು ಕಪ್ಪು ಚುಕ್ಕೆ ಇಲ್ಲದಂತೆ ಆಡಳಿತ ನಡೆಸಿದರು ಹಾಗಾಗಿ ಮೊದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ನನ್ನನ್ನು ಗೆಲ್ಲಿಸಿ, ಲೋಕಸಭೆಗೆ ಕಳುಹಿಸಬೇಕು ಎಂದು ಮನವಿ ಮಾಡಿದರು.‌
ಈ ಸಂದರ್ಭದಲ್ಲಿ ಪ್ರಮುಖರಾದ ವಿನೋಧ ದೊಡ್ಡಣ್ಣವರ, ಡಾ. ಸಾವಿತ್ರಿ ದೊಡ್ಡಣ್ಣವರ, ಶ್ರೀಕಾಂತ ಕಮಲೆಪುರ, ಚಂದು ಕಲ್ಲಮನಿ, ಅಶೋಕ ದನವಾಡೆ, ದೇವಿಂದ್ರ ದೇಸಾಯಿ ಹಾಗೂ ಇತರರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article