ಸರ್ಕಾರಿ ಆಸ್ಪತ್ರೆನಲ್ಲಿನ ಉಚಿತ ಸೇವಾ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಲು ನ್ಯಾ.ರಾಜೇಶ್ ಎನ್.ಹೊಸಮನೆ ಕರೆ

Pratibha Boi
ಸರ್ಕಾರಿ ಆಸ್ಪತ್ರೆನಲ್ಲಿನ ಉಚಿತ ಸೇವಾ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಲು ನ್ಯಾ.ರಾಜೇಶ್ ಎನ್.ಹೊಸಮನೆ ಕರೆ
WhatsApp Group Join Now
Telegram Group Join Now
ಬಳ್ಳಾರಿ: (ಡಿ.13), ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗುವಂತಹ ಉಚಿತ ಸೇವಾ ಸೌಲಭ್ಯಗಳನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಬಂಡಿಹಟ್ಟಿ ಇವರ ಸಹಯೋಗದಲ್ಲಿ ಬಂಡಿಹಟ್ಟಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಏರ್ಪಡಿಸಿದ್ದ “ಯುನಿವರ್ಸ್ಲ್ ಹೆಲ್ತ್ ಕವರೇಜ್ ಡೇ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು. ಆರೋಗ್ಯ ಸಮಸ್ಯೆ ಕಂಡುಬAದಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ಹೋಗದೇ ಸರ್ಕಾರಿ ಆಸ್ಪತ್ರೆಗಳಿಗೆ ತೆರಳಿ ಉಚಿತವಾಗಿ ಸಿಗುವಂತಹ ವೈದ್ಯರ ಆರೋಗ್ಯ ತಪಾಸಣೆ, ರಕ್ತ ಪರೀಕ್ಷೆ ಹಾಗೂ ಇತರೆ ಪರೀಕ್ಷೆಗಳ ಸೇವೆ ಪಡೆದುಕೊಳ್ಳಬಹುದಾಗಿದೆ ಎಂದು ಹೇಳಿದರು.
ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಹನುಮಂತಪ್ಪ ಅವರು ಮಾತನಾಡಿ, ನಮ್ಮ ದಿನ ನಿತ್ಯ ಚಟುವಟಿಕೆಗಳಲ್ಲಿ ಜೀವನ ಶೈಲಿಯನ್ನು ಬದಲಾವಣೆ ಮಾಡಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು. ಅಸಾಂಕ್ರಾಮಿಕ ರೋಗಗಳ ಅರಿವು ಹೊಂದಬೇಕು ಎಂದು ತಿಳಿಸಿದರು.
ಹದಿಹರೆಯದವರ ಆರೋಗ್ಯ, ಸ್ನೇಹ ಕ್ಲಿನಿಕ್, ಗರ್ಭಿಣಿ ತಾಯಂದಿರ ಆರೈಕೆ, ಗರ್ಭಿಣಿಯರ ಆರೋಗ್ಯ ತಪಾಸಣೆ, ಪ್ರಧಾನ ಮಂತ್ರಿ ಸುರಕ್ಷಾ ಮಾತೃತ್ವ ಅಭಿಯಾನ ಹಾಗೂ ಜೆ.ಎಸ್.ವೈ ಮತ್ತು ಜೆ.ಎಸ್.ಎಸ್.ಕೆ, ಆರ್.ಬಿ.ಎಸ್.ಕೆ, ಆರ್.ಕೆ.ಎಸ್.ಕೆ ಮತ್ತು ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ, ಕುಟುಂಬ ಕಲ್ಯಾಣ ವಿಧಾನಗಳಾದ ತಾತ್ಕಾಲಿಕ ವಿಧಾನ, ಶಾಶ್ವತ ವಿಧಾನಗಳ ಬಗ್ಗೆ ಹಾಗೂ ಅಯೋಡಿನ್ ಉಪ್ಪಿನ ಮಹತ್ವ ಕುರಿತು ಮಾಹಿತಿ ತಿಳಿಸಿದರು.
ಜಿಲ್ಲಾ ಮಾನಸಿಕ ವಿಭಾಗದ ಕ್ಲಿನಿಕಲ್ ಸೈಕಾಲಾಜಿಷ್ಟ್ ಸರ್ಮಸ್‌ವಲಿ, ಮಾನಸಿಕ ಆರೋಗ್ಯ ಕಾರ್ಯಕ್ರಮದ ಕುರಿತು ಮಾಹಿತಿ ನೀಡುತ್ತಾ ಟೆಲಿಮನಸ್ 14416 ಉಚಿತ ಕರೆಯ ಸೇವೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಸರಸ್ವತಿ ಅವರು ಅಗೆಯುವ ತಂಬಾಕು ಹಾಗೂ ಸೇದುವ ತಂಬಾಕುನಿAದ ದೇಹದ ಮೇಲೆ ಆಗುವಂತಹ ದುಷ್ಪರಿಣಾಮಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.
ಎನ್.ಜಿ.ಒ ಹುಮಾನ ಪಿಪುಲ್ ಟು ಪಿಪುಲ್ ಇಂಡಿಯಾ ಸಂಸ್ಥೆಯ ಭೂದೇವಿ ಅವರು ಮಾತನಾಡಿ, ಸ್ತನ ಕ್ಯಾನ್ಸರ್ ಅನ್ನು ಪ್ರಾರಂಭಿಕ ಹಂತದಲ್ಲೇ ಗುರ್ತಿಸಿ ವೈದ್ಯರಲ್ಲಿ ಸೂಕ್ತ ಚಿಕಿತ್ಸೆ ಪಡೆಯಲು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳಾದ ಡಾ.ಯಾಸ್ಮೀನ್, ಡಾ.ಸ್ಯಾಮ್ಯುಯೆಲ್, ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಮ್ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ವರ್ಗದವರು, ಆಶಾಕಾರ್ಯಕರ್ತೆಯರು, ಸಾರ್ವಜನಿಕರು
WhatsApp Group Join Now
Telegram Group Join Now
Share This Article