ಮುಂಗಾರು, ಚಂಡಮಾರುತದಿಂದಾಗಿ ಕರ್ನಾಟಕದ್ಯಂತ ಡಿಸೆಂಬರ್ 20ರವರೆಗೂ ಆಗಾಗ ಮಳೆಯಾಗುತ್ತಲೇ ಇತ್ತು. ಇದೀಗ ಶೀತ ಗಾಳಿ ಶುರುವಾಗಿದ್ದು ಚಳಿಗಾಲದ ಅನುಭವವಾಗತೊಡಗಿದೆ. ಜನವರಿ ಮೊದಲ ವಾರದವರೆಗೂ ಚಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರದಲ್ಲೂ ಚಳಿಯ ವಾತಾವರಣವಿರಲಿದೆ.
ಹೊನ್ನಾವರದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.