ನ.15 ರಂದು ಮೇಯರ್, ಉಪಮೇಯರ್ ಹಾಗೂ ಸ್ಥಾಯಿ ಸಮಿತಿ ಸ್ಥಾನಗಳಿಗೆ ಚುನಾವಣೆ

Ravi Talawar
ನ.15 ರಂದು ಮೇಯರ್, ಉಪಮೇಯರ್ ಹಾಗೂ ಸ್ಥಾಯಿ ಸಮಿತಿ ಸ್ಥಾನಗಳಿಗೆ ಚುನಾವಣೆ
WhatsApp Group Join Now
Telegram Group Join Now


ಬಳ್ಳಾರಿ ಮಹಾನಗರ ಪಾಲಿಕೆ ಸುತ್ತ 500 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶ

ಬಳ್ಳಾರಿ,ನ.14 ಬಳ್ಳಾರಿ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್, ಉಪ ಮೇಯರ್ ಹಾಗೂ ಸ್ಥಾಯಿ ಸಮಿತಿ ಸ್ಥಾನಗಳಿಗೆ ನವೆಂಬರ್ 15 ರಂದು ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸುವುದರಿಂದ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸೂಕ್ತ ರಕ್ಷಣೆ ಒದಗಿಸುವ ಹಿತದೃಷ್ಠಿಯಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ಕಲಂ 163 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಬಳ್ಳಾರಿ ಮಹಾನಗರ ಪಾಲಿಕೆ ಸುತ್ತ-ಮುತ್ತಲಿನ 500 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶಿಸಿದ್ದಾರೆ.

*ನಿಷೇಧಿಸಲಾದ ಚಟುವಟಿಕೆ:*
ಇಂಕ್ (ಮಸಿ), ನೀರು, ಬೆಂಕಿ ಪೊಟ್ಟಣ, ಲೈಟರ್ ಮತ್ತು ಇತರೆ ಅಪಾಯಕಾರಿ ವಸ್ತುಗಳನ್ನು ತೆಗೆದುಕೊಂಡು ಹೋಗುವುದು. ಶಸ್ತç, ಬಡಿಗೆ, ಬರ್ಚಿಗದೆ, ಬಂದೂಕು, ಚಾಕು, ಚೂರಿ, ಕೋಲು, ಲಾಠಿ ಅಥವಾ ಶರೀರಕ್ಕೆ ಗಾಯ ಮಾಡಲು ಉಪಯೋಗಿಸಬಹುದಾದ ಯಾವುದೇ ವಸ್ತು ತೆಗೆದುಕೊಂಡು ಹೋಗುವುದು.

ಯಾವುದೇ ದಾಹಕ (ನಾಶಕಾರಿ) ಇಲ್ಲವೆ ಸ್ಫೋಟಕ ವಸ್ತು ಒಯ್ಯುವುದು, ಪಟಾಕಿ/ಸಿಡಿಮದ್ದು ಸಿಡಿಸುವುದು. ಕಲ್ಲು ಎಸೆಯುವ ವಸ್ತು ಅಥವಾ ಅಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಶಸ್ತçಗಳು ಅಥವಾ ಸಾಧನಗಳು ಇವುಗಳನ್ನು ತೆಗೆದುಕೊಂಡು ತಿರುಗಾಡುವುದು.

ಕಾರು, ಮೋಟರ್ ಬೈಕ್ ಮತ್ತು ಇತರೆ ವಾಹನಗಳಲ್ಲಿ ರ‍್ಯಾಲಿಯನ್ನು ಆಯೋಜಿಸುವುದು. ವಿಜಯೋತ್ಸವಗಳನ್ನು ಆಚರಿಸುವುದು ಹಾಗೂ ಭೋಜನಕೂಟಗಳನ್ನು ಏರ್ಪಡಿಸುವುದು. 5 ಕ್ಕಿಂತ ಹೆಚ್ಚು ಜನರು ಗುಂಪುಗೂಡಿ ತಿರುಗಾಡುವುದು (ಮಹಾನಗರ ಪಾಲಿಕೆ ಸಿಬ್ಬಂದಿ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಹೊರಡುಪಡಿಸಿ).
ಬಹಿರಂಗವಾಗಿ ಘೋಷಣೆ ಕೂಗುವುದು, ಪದ ಹಾಕುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನ ಹಾಗೂ ಆಫೀಸರ್ ಅಭಿಪ್ರಾಯದಲ್ಲಿ ಸಭ್ಯತೆ, ನೀತಿಯನ್ನು ಅತಿಕ್ರಮಿಸಬಹುದಾದ ಯಾವುದೇ ವಸ್ತು ಅಥವಾ ಪದಾರ್ಥದ ತಯಾರಿ ಪ್ರದರ್ಶನ ಅಥವಾ ಪ್ರಸಾರ ಮಾಡುವುದು ನಿಷೇಧಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿಯೂ ಆಗಿರುವ

WhatsApp Group Join Now
Telegram Group Join Now
Share This Article