ಧಾರವಾಡ : ಚಿತ್ರಕಲಾ ಶಿಲ್ಪಿ ಶ್ರೀ ಡಿ. ವ್ಹಿ. ಹಾಲಭಾವಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ವತಿಯಿಂದ ಶ್ರೀ ಡಿ.ವಿ. ಹಾಲಭಾವಿ ಪುಣ್ಯಸ್ಮರಣೆ ಕಾರ್ಯಕ್ರಮ ಹಾಗೂ ಚಿತ್ರಕಲೆ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಡಿಸೆಂಬರ್ 26, 2024 ರಂದು ಬೆಳಿಗ್ಗೆ 11 ಗಂಟೆಗೆ ಆರ್ಟ್ ಗ್ಯಾಲರಿ ಸರಕಾರಿ ಚಿತ್ರಕಲಾ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದೆ.
ಚಿತ್ರಕಲಾ ಶಿಲ್ಪಿ ಶ್ರೀ ಡಿ.ವಿ.ಆಲಭಾವಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ನ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು.
ದಾವಣಗೇರಿ ವಿಶ್ವವಿದ್ಯಾಲಯದ ದೃಶ್ಯಕಲಾ ಮಹಾವಿದ್ಯಾಲಯ ಪ್ರಾಚಾರ್ಯ ಡಾ. ಜೈರಾಜ್ ಎಂ. ಚಿಕ್ಕಪಾಟೀಲ ಕಾರ್ಯಕ್ರಮದ ಮುಖ್ಯ ಅತಿಥಿ ಸ್ಥಾನವಹಿಸುವರು.
ಟ್ರಸ್ಟ್ ಸದಸ್ಯರುಗಳಾದ ಸುರೇಶ ಹಾಲಭಾವಿ, ಡಾ. ಪಾರ್ವತಿ ಹಾಲಭಾವಿ, ಡಾ. ಬಿ. ಮಾರುತಿ, ಡಾ. ಬಿ. ಹೆಚ್.ಕುರಿಯವರ, ಕುಮಾರ ಕಾಟೇನಹಳ್ಳಿ, ವಿಜಯಾನಂದ ಕಾಲವಾಡ ಅವರು ಕಾರ್ಯಕ್ರಮದ ಉಪಸ್ಥಿತಿ ವಹಿಸುವರು.