ಮೇ 12 ರಂದು ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮ

Ravi Talawar
ಮೇ 12 ರಂದು ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮ
Oplus_131072
WhatsApp Group Join Now
Telegram Group Join Now

ಬಳ್ಳಾರಿ,ಮೇ 07 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಮೇ 12 ರಂದು ಸಂಜೆ 06.30 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಭಾರತೀಯ ಬೌದ್ಧ ಮಹಾಸಭಾ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷರಾದ ಕಮಲರತ್ನ ಬಂತೇಜಿ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಸಂಸ್ಕೃತಿ ಚಿಂತಕರಾದ ಡಾ.ವೆಂಕಟಗಿರಿ ದಳವಾಯಿ ಅವರು ಜಯಂತಿ ಕಾರ್ಯಕ್ರಮದ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಬಳ್ಳಾರಿಯ ಜಡೇಶ್ ಎಮ್ಮಿಗನೂರು ಅವರು ಬುದ್ಧ-ಬಸವಣ್ಣ-ಅಂಬೇಡ್ಕರ್ ಅವರ ಕುರಿತ ಗೀತೆಗಳು ಪ್ರಸ್ತುತ ಪಡಿಸುವರು.
*ಮೆರವಣಿಗೆ:*
ಜಯಂತಿ ಅಂಗವಾಗಿ ಅಂದು ಸಂಜೆ 04.30 ಗಂಟೆಗೆ ನಗರದ ಮುನ್ಸಿಪಲ್ ಕಾಲೇಜು ಮೈದಾನದಿಂದ ಮೆರವಣಿಗೆ ನಡೆಯಲಿದೆ. ಮೆರವಣಿಗೆಯು ಮುನ್ಸಿಪಲ್ ಕಾಲೇಜು ಮೈದಾನದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ-ಬೆಂಗಳೂರು ರಸ್ತೆ-ಹಳೆ ಬ್ರೂಸ್ ಪೇಟೆ ಪೊಲೀಸ್ ಠಾಣೆ ರಸ್ತೆ-ತೇರು ಬೀದಿ-ಹೆಚ್.ಆರ್.ಗವಿಯಪ್ಪ ವೃತ್ತದ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದವರೆಗೆ ನಡೆಯಲಿದೆ.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಮಹಾನಗರ ಪಾಲಿಕೆ ಆಯುಕ್ತರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ  ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
WhatsApp Group Join Now
Telegram Group Join Now
Share This Article