ವಿಜಯನಗರ: ವಿಜಯನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.11 ಮತ್ತು 12 ರಂದು ಆಯೋಜಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ತಾಲೂಕು ಮಟ್ಟದ ಕ್ರೀಡಾಕೂಟಗಳು ಸೆ.11 ರಂದು ಕೊಟ್ಟೂರು ತಾಲೂಕು ಕ್ರೀಡಾಂಗಣದಲ್ಲಿ ಹಾಗೂ ಸೆ.12 ರಂದು ಹೊಸಪೇಟೆ ತಾಲೂಕು ಮಟ್ಟದ ಜಿಲ್ಲಾ ಕ್ರೀಡಾಂಗಣ ಮತ್ತು ಹರಪನಹಳ್ಳಿ, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿಯಲ್ಲಿ ತಾಲೂಕು ಕ್ರೀಡಾಂಗಣಗಳಲ್ಲಿ ಹಾಗೂ ಕೂಡ್ಲಿಗಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ.
ತಾಲೂಕು ಮಟ್ಟದ ದಸರಾ ಕ್ರೀಡಾಕೂಟಗಳು : ಅಥ್ಲೆಟಿಕ್ಸ್, ವಾಲಿಬಾಲ್, ಕಬಡ್ಡಿ, ಖೋ-ಖೋ, ಫುಟ್ಟಾಲ್ (ಪುರುಷರಿಗೆ ಮಾತ್ರ), ಮತ್ತು ಥ್ರೋಬಾಲ್ ಯೋಗವನ್ನು ಆಯೋಜಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ : ಹೊಸಪೇಟೆ ಮೊ.7026101408, ಹರಪನಹಳ್ಳಿ 9972048628, ಹೂವಿನಹಡಗಲಿ 9900751867, ಹಗರಿಬೊಮ್ಮನಹಳ್ಳಿ 9986675441, ಕೂಡ್ಲಿಗಿ 9916767880, 9972810101 ಮತ್ತು ಕೊಟ್ಟೂರು 9916767880, 9731330391 ಸಂಖ್ಯೆಗಳಿಗೆ ಕರೆ ಮಾಡಿ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.