ಸೆ.29 ರಂದು ಜಿಲ್ಲಾಮಟ್ಟದ ಜನಸ್ಪಂದನ; ಸ್ಥಳದಲ್ಲೇ ಸಮಸ್ಯೆಗೆ ಪರಿಹಾರ-ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ

Ravi Talawar
ಸೆ.29 ರಂದು ಜಿಲ್ಲಾಮಟ್ಟದ ಜನಸ್ಪಂದನ; ಸ್ಥಳದಲ್ಲೇ ಸಮಸ್ಯೆಗೆ ಪರಿಹಾರ-ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ
WhatsApp Group Join Now
Telegram Group Join Now
ಬಳ್ಳಾರಿ,ಸೆ.26.: ಇದೇ ಸೆ.29 ರಂದು ನಗರದ ನೂತನ ಜಿಲ್ಲಾಡಳಿತ ಭವನದ ಆವರಣದಲ್ಲಿ ವಸತಿ, ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಜಿಲ್ಲಾಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು.
ಗುರುವಾರ, ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ಆಯೋಜನೆ ಕುರಿತು ಪೂರ್ವಭಾವಿ ಸಭೆ ನಡೆಸಿ, ಕಾರ್ಯಕ್ರಮದ ಅಚ್ಚುಕಟ್ಟು ಆಯೋಜನೆ ಹಾಗೂ ಅದನ್ನು ಯಶಸ್ವಿಗೊಳಿಸುವ ಬಗ್ಗೆ ಅವರು ಚರ್ಚಿಸಿದರು.
ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿ ಪರಿಹರಿಸಲು ಜಿಲ್ಲಾ ಕೇಂದ್ರದಲ್ಲಿ ಸೆ.29 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಆವರಣದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಬೇಕು. ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಜರಿದ್ದು, ವಿಶೇಷ ಆಸಕ್ತಿ ವಹಿಸಿ ಕುಂದು ಕೊರತೆ ನಿವಾರಣೆಗೆ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಸರ್ಕಾರದ ಆಡಳಿತವನ್ನು ಸಾರ್ವಜನಿಕರ ಮನೆಬಾಗಿಲಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ವಸತಿ, ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಬಳ್ಳಾರಿ ಜಿಲ್ಲಾ  ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಅಧ್ಯಕ್ಷತೆ ವಹಿಸಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ. ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ಜನಪ್ರತಿನಿಧಿಗಳು ಸಹ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ವಿವಿಧ ಇಲಾಖೆಗಳ ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರುಗಳನ್ನು ಸ್ಥಾಪಿಸಿ, ಅದಕ್ಕೆ ಅಗತ್ಯವಿರುವ ಎಲ್ಲ ಉಪಕರಣಗಳೂ ಹಾಗೂ ಸಿಬ್ಬಂದಿ ನಿಯೋಜಿಸಬೇಕು. ಕಳೆದ ಬಾರಿಯ ಜನಸ್ಪಂದನದಲ್ಲಿ ಸ್ವೀಕರಿಸಿದ ಅರ್ಜಿಗಳ ವಿಲೇವಾರಿ ಮಾಹಿತಿ ಇಟ್ಟುಕೊಂಡಿರಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜನಸ್ಪಂದನ ಕಾರ್ಯಕ್ರಮಕ್ಕೆ ಆಗಮಿಸುವ ವಿಶೇಷಚೇತನರು, ಹಿರಿಯನಾಗರಿಕರಿಗೆ ವಿಶೇಷ ವ್ಯವಸ್ಥೆ ಮಾಡಬೇಕು. ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಬೇಕು. ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮುಖ್ಯವಾಗಿ ಹಲವು ದಿನಗಳ ಬಳಿಕ ಜಿಲ್ಲಾಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಿದ್ದಾರೆ. ಕುಂದುಕೊರತೆಗಳನ್ನು ಸರಿಯಾಗಿ ಪರಿಹರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಎಲ್ಲಾ ಇಲಾಖೆಗಳು ಎಲ್ಲಾ ಮಾಹಿತಿಯೊಂದಿಗೆ ಸಿದ್ಧರಾಗಿರಬೇಕು ಎಂದರು.

ಅAದು ಜಿಲ್ಲಾ ಉಸ್ತುವಾರಿ ಸಚಿವರು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸಂಬAಧಪಟ್ಟ ಇಲಾಖೆಗಳ ಮುಖ್ಯಸ್ಥರು ತಮ್ಮ ಯೋಜನಾ ವಿವರಗಳು ಮತ್ತು ಇತರ ಅಗತ್ಯ ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಕೃಷಿ, ತೋಟಗಾರಿಕೆ, ಕೊಳಗೇರಿ ಅಭಿವೃದ್ಧಿ ಮಂಡಳಿ ಇಲಾಖೆಗಳಿಂದ ವಿವಿಧ ಸೌಲಭ್ಯಗಳು, ಉಪಕರಣಗಳು ವಿತರಣೆ ಇದ್ದಲ್ಲಿಯೂ ಸಹ ಮಾಹಿತಿ ನೀಡಬೇಕು ಎಂದರು.

ಜಿಲ್ಲಾಮಟ್ಟದ ‘ಜನಸ್ಪಂದನ’ ಕಾರ್ಯಕ್ರಮದ ಬಳಿಕ, ಜಿಲ್ಲಾ ಉಸ್ತುವಾರಿ ಸಚಿವರು ಅಂದು (ಸೆ.29 ರಂದು) ಮಧ್ಯಾಹ್ನ 02 ಗಂಟೆಗೆ ನಗರದ ಜಿಲ್ಲಾ ಪಂಚಾಯತ್‌ನ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಮೊದಲ ತ್ರೆöÊಮಾಸಿಕ ಸಭೆ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸೆ.29 ರಂದು ನಗರದ ನೂತನ ಜಿಲ್ಲಾಡಳಿತ ಭವನದ ಆವರಣದಲ್ಲಿ ನಡೆಯುವ ಜಿಲ್ಲಾ ಮಟ್ಟದ ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಕುಂದು-ಕೊರತೆಗಳಿರುವ ಸಾರ್ವಜನಿಕರು ಭಾಗವಹಿಸಿ, ತಮ್ಮ ಅಹವಾಲುಗಳ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಜಿಪಂ ಉಪಕಾರ್ಯದರ್ಶಿ ಶಶಿಕಾಂತ ಶಿವಪೂರೆ, ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು
WhatsApp Group Join Now
Telegram Group Join Now
Share This Article