ಗದಗ, 8 : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ದೊರೆಯಬಹುದಾದ ವಿವಿಧ ಸೌಲಭ್ಯಗಳಿಗಾಗಿ ದಿನಾಂಕ 10-09-2025 ರಂದು ಬೆಳಿಗ್ಗೆ 11 ಗಂಟೆಗೆ ಗದಗ ಜಿಲ್ಲಾ ಸಾಂಸ್ಕೃತಿಕ ಸಂಘಟನೆಗಳು ಹಾಗೂ ಜಿಲ್ಲೆಯ ಕಲಾವಿದರಿಂದ ಜಿಲ್ಲಾಧಿಕಾರಿ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರಿಗೆ ಮನವಿ ಅರ್ಪಿಸಲಾಗುವುದು.
ಭಾಗವಹಿಸುವ ಸಂಘಟನೆಗಳ ಮುಖ್ಯಸ್ಥರು ಮತ್ತು ಕಲಾವಿದರು ದಿನಾಂಕ 10 ರಂದು ಬೆಳಿಗ್ಗೆ 10-30 ಗಂಟೆಗೆ ಗದಗ ನಗರದ ಪ್ರವಾಸಿ ಮಂದಿರಕ್ಕೆ ಆಗಮಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಜಾನಪದ ಅಕಾಡೆಮಿಯ ಸದಸ್ಯರಾದ ಶಂಕ್ರಣ್ಣ ಸಂಕಣ್ಣವರ ಮೊ-9740052017 ಅಥವಾ ಕಲಾವಿದರಾದ ಮೌನೇಶ ಚಿ. ಬಡಿಗೇರ(ನರೇಗಲ್ಲ) ಮೊ- 9972391031 ಮತ್ತು ಕಲಾವಿದರಾದ ಸೋಮು ಚಿಕ್ಕಮಠ ಮೊ- 7899325108 ಸಂಖ್ಯೆಗಳಿಗೆ ಸಂಪರ್ಕಿಸಲು ಕೋರಲಾಗಿದೆ.